ಸಮಗ್ರ ಮಾಹಿತಿ ನೀಡದಿದ್ದರೆ ಶಿಸ್ತು ಕ್ರಮ

7

ಸಮಗ್ರ ಮಾಹಿತಿ ನೀಡದಿದ್ದರೆ ಶಿಸ್ತು ಕ್ರಮ

Published:
Updated:

ಕೋಲಾರ: ‘ಕಂದಾಯ ಸಚಿವರು ಜಿಲ್ಲೆಗೆ ಭೇಟಿ ನೀಡಲಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ಸಮಗ್ರ ಮಾಹಿತಿ ನೀಡಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖಾಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿ, ‘ಸ್ವಾತಂತ್ರ್ಯ ದಿನಾಚರಣೆ ನಂತರ ವಿವಿಧ ಇಲಾಖೆಗಳ ಸಚಿವರು ಜಿಲ್ಲೆಗೆ ಆಗಮಿಸಲಿದ್ದಾರೆ. ಅವರು ಕೇಳಿದ ಮಾಹಿತಿಯನ್ನು ಅಧಿಕಾರಿಗಳು ಸಮರ್ಪಕವಾಗಿ ನೀಡದಿದ್ದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

‘ಅಯಾ ಇಲಾಖೆಯ ಅಧಿಕಾರಿಗಳು ವಿವಿಧ ಯೋಜನೆ, ಕಾಮಗಾರಿ ಕುರಿತು ಅಂಕಿ ಅಂಶ ಸಮೇತ ಮಾಹಿತಿ ಹೊಂದಿರಬೇಕು. ಯಾವ ಇಲಾಖೆಯಲ್ಲಿ ಸಮಿತಿ, ನಿಗಮ, ಮಂಡಳಿಗೆ ಅಧ್ಯಕ್ಷರು, ಸದಸ್ಯರ ನಾಮ ನಿರ್ದೇಶನವಾಗಬೇಕಿದೆ ಎಂಬುದರ ಕುರಿತು ಮಾಹಿತಿ ಒದಗಿಸಬೇಕು’ ಎಂದು ಹೇಳಿದರು.

‘ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗೆ ಕಟ್ಟಡ ಅವಶ್ಯಕತೆ ಕುರಿತು ಮಾಹಿತಿ ನೀಡಬೇಕು. ಸ್ಥಳವನ್ನು ಗುರುತಿಸಿ, ಅದು ಗ್ರಾಮ ಠಾಣೆಯಾದರೆ ಗ್ರಾಮ ಪಂಚಾಯಿತಿ, ಸರ್ಕಾರಿ ಜಮೀನಾದರೆ ತಹಸೀಲ್ದಾರ್ ಅವರನ್ನು ಸಂಪರ್ಕಿಸಿ ವರದಿ ನೀಡಿದರೆ, ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ, ಮಂಜೂರು ಮಾಡಿಸಲು ಕ್ರಮಕೈಗೊಳ್ಳಲಾಗುವುದು’ ಎಂದರು.

‘ಅಂಗನವಾಡಿ ಕೇಂದ್ರಗಳಲ್ಲಿ ನ್ಯೂಟ್ರೀಷನ್ ಡೇ ಆಚರಿಸಬೇಕು. ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮಗಳಲ್ಲಿ ಗ್ರಾಮ ಸ್ವರಾಜ್ ಅಭಿಯಾನದ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸಲು ಅಯಾ ಇಲಾಖೆಯ ಅಧಿಕಾರಿಗಳು ಕ್ರಮಕೈಗೊಳ್ಳಬೇಕು’ ಎಂದು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಕಾರಿ ಕೆ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರೋಹಿಣಿ ಕಟೋಚ್ ಸಫೆಟ್ ಹಾಜರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !