‘ಹಿಂದೂಗಳ ಕಡೆಗಣನೆಯಿಂದ ಕಾಂಗ್ರೆಸ್ ಸೋಲು’

7
ವಿಧಾನ ಪರಿಷತ್‌ನ ಜೆಡಿಎಸ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ

‘ಹಿಂದೂಗಳ ಕಡೆಗಣನೆಯಿಂದ ಕಾಂಗ್ರೆಸ್ ಸೋಲು’

Published:
Updated:

ಮಂಗಳೂರು: ‘ಹಿಂದೂಗಳನ್ನು ಕಡೆಗಣಿಸಿದ್ದೇ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕರಾವಳಿಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲಲು ಕಾರಣ' ಎಂದು ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಎಸ್.ಎಲ್.ಭೋಜೇಗೌಡ ಹೇಳಿದರು.

ನಗರದ ಸರ್ಕ್ಯೂಟ್ ಹವಸ್ ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದಿನ‌ ಚುನಾವಣೆಯಲ್ಲಿ ಕರಾವಳಿಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗಳಿಸಿತ್ತು. ಈಗ ಹೀನಾಯವಾಗಿ ಸೋತಿದೆ. ಕಳೆದ ಚುನಾವಣೆಯಲ್ಲಿ ಹಿಂದೂಗಳು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದರು. ಈ ಚುನಾವಣೆಯಲ್ಲಿ ಹಿಂದೂಗಳ ಮತಗಳು ಎಲ್ಲಿ ಹೋದವು ಎಂಬುದನ್ನು ಕಾಂಗ್ರೆಸ್ ತಿಳಿಯಬೇಕು' ಎಂದರು.

‘ಐದು ವರ್ಷಗಳ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ನಡೆದ ಬೆಳವಣಿಗೆಗಳು ಹಿಂದೂ ಮತಗಳ ಧ್ರುವೀಕರಣಕ್ಕೆ ಕಾರಣವಾಯಿತು. ಅದು ಕಾಂಗ್ರೆಸ್ ಸೋಲಿಗೆ ದಾರಿ ಮಾಡಿತು. ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಅಲ್ಪಸಂಖ್ಯಾತರನ್ನು ಜೊತೆಗೆ ಇರಿಸಿಕೊಂಡೇ ಹಿಂದೂಗಳಿಗೆ ಆದ್ಯತೆ ನೀಡುವಂತೆ ನಮ್ಮ ಪಕ್ಷದ‌ ಮುಖಂಡರಿಗೆ ಸೂಚಿಸಿದ್ದೇನೆ' ಎಂದು ಹೇಳಿದರು.

ಅಲ್ಪಸಂಖ್ಯಾತರ ತುಷ್ಟೀಕರಣ ನಡೆದಿದೆ ಎಂಬ ಆರೋಪವನ್ನು ಮಾಡುವುದಿಲ್ಲ. ಆದರೆ, ಕಾಂಗ್ರೆಸ್‌ ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಹಿಂದೂ ಮತಗಳು ಒಂದೆಡೆ ಧ್ರುವೀಕರಣಗೊಂಡವು. ಇದಕ್ಕೆ ಕಾಂಗ್ರೆಸ್‌ ಪಕ್ಷದ ನಿಲುವುಗಳೇ ಕಾರಣ ಎಂದರು.

ಸ್ಥಳೀಯವಾಗಿ ನಿರ್ಧಾರ:  ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ. ಈ ಕುರಿತು ರಾಜ್ಯ ಮಟ್ಟದಲ್ಲಿ ನಿರ್ಧಾರ ಆಗುವುದಿಲ್ಲ. ಸ್ಥಳೀಯ ಕಾರ್ಯಕರ್ತರ ಜೊತೆ ಸಮಾಲೋಚಿಸಿ ನಿರ್ಧಾರಕ್ಕೆ ಬರಲಾಗುವುದು ಎಂದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !