ಹಾಸ್ಟೆಲ್‌ಗಳಿಗೆ ಸೊಳ್ಳೆಪರದೆ ವಿತರಿಸಿ

7
ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚನೆ

ಹಾಸ್ಟೆಲ್‌ಗಳಿಗೆ ಸೊಳ್ಳೆಪರದೆ ವಿತರಿಸಿ

Published:
Updated:
Deccan Herald

ಉಡುಪಿ: ಮಲೇರಿಯಾ ಪ್ರಕರಣಗಳು ನಗರ ಪ್ರದೇಶಗಳಲ್ಲಿ ಹೆಚ್ಚು ವರದಿಯಾಗುತ್ತಿದ್ದು, ನಗರ ಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿರುವ ಎಲ್ಲ ಹಾಸ್ಟೆಲ್‌ಗಳ ವಿಧ್ಯಾರ್ಥಿಗಳಿಗೆ ಸುರಕ್ಷತೆ ದೃಷ್ಟಿಯಿಂದ ಸೊಳ್ಳೆ ಪರದೆಗಳನ್ನು ವಿತರಿಸುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಹಾರ ಸುರಕ್ಷತಾ ಸಲಹಾ ಸಮಿತಿ ಅಂತರ್ ಇಲಾಖೆಯ ಮಲೇರಿಯಾ ಮತ್ತು ಡೆಂಗಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಳೆದ ಬಾರಿಗೆ ಹೋಲಿಸಿದರೆ, ಈ ವರ್ಷ ಮಲೇರಿಯಾ ಪ್ರಕರಣಗಳು ಕಡಿಮೆ ವರದಿಯಾಗಿವೆ. ಆದರೆ, ನಗರ ಪ್ರದೇಶದಲ್ಲಿ ಪ್ರಕರಣಗಳು ಹೆಚ್ಚಾಗಿದ್ದು, ವಲಸೆ ಕಾರ್ಮಿಕರಲ್ಲಿ ಹೆಚ್ಚು ಪ್ರಕರಣಗಳು ಕಂಡು ಬರುತ್ತಿವೆ ಎಂದು ಜಿಲ್ಲಾ ಮಲೇರಿಯ ಅಧಿಕಾರಿ ಡಾ.ಪ್ರೇಮಾನಂದ ಮಾಹಿತಿ ನೀಡಿದರು.

ಹಾಸ್ಟೆಲ್‌ಗಳ ಕಿಟಕಿಗಳಿಗೆ ಮೆಷ್ ಅಳವಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ನಗರ ಪ್ರದೇಶದ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿಬ್ಬಂದಿ ನೇಮಕ ಮಾಡಲು ಕ್ರಮ ಕೈಗೊಳ್ಳುವಂತೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳ ಮೂಲಕ ಸಮುದಾಯದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಆದೇಶಿಸಿದರು.

ಡೆಂಗಿ ಮತ್ತು ಮಲೇರಿಯಾ ನಿಯಂತ್ರಣ ಕುರಿತಂತೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಕುರಿತಂತೆ ಅರಿವು ಮೂಡಿಸಿ, ಬಾವಿಗಳಲ್ಲಿ ಗಪ್ಪಿ ಮತ್ತು ಗಂಬೂಶಿಯಾ ಮೀನು ಸಾಕಾಣಿಕೆಗೆ ಮಾಹಿತಿ ನೀಡಿ. ಅಗತ್ಯವಿರುವ ಮೀನುಗಳನ್ನು ಉತ್ಪಾದಿಸಿ ಸಾರ್ವಜನಿಕರಿಗೆ ವಿತರಿಸುವಂತೆ ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಹಾಗೂ ಆರೋಗ್ಯ ಇಲಾಖೆ ಮತ್ತು ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !