ಲಾರಿ ಪಲ್ಟಿ: ಒಬ್ಬ ಸಾವು

7
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ, ಸರಕು ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದು ಉರುಳಿದ ಲಾರಿ, ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ

ಲಾರಿ ಪಲ್ಟಿ: ಒಬ್ಬ ಸಾವು

Published:
Updated:
Deccan Herald

ಚಿಕ್ಕಬಳ್ಳಾಪುರ: ಸಿಮೆಂಟ್ ಸಾಗಿಸುತ್ತಿದ್ದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 7ರಲ್ಲಿ ದೊಡ್ಡಪೈಲಗುರ್ಕಿ ಗೇಟ್‌ ಬಳಿ ಭಾನುವಾರ ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ಮತ್ತು ಸರಕು ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಒಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.

ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದು, ಸಿಮೆಂಟ್ ಚೀಲಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಹರಡಿದ ಕಾರಣದಿಂದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಕೆಲ ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಕ್ರೇನ್ ಸಹಾಯದಿಂದ ಲಾರಿಯನ್ನು ರಸ್ತೆ ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಅಪಘಾತಕ್ಕಿಡಾದ ಎರಡು ವಾಹನಗಳು ಬಾಗೇಪಲ್ಲಿ ಕಡೆಯಿಂದ ಬೆಂಗಳೂರಿನತ್ತ ಹೊರಟ್ಟಿದ್ದವು. ಸರಕು ಸಾಗಣೆ ವಾಹನ ಹನಿ ನೀರಾವರಿ ಪೈಪ್‌ ಸುರುಳಿಗಳನ್ನು ಸಾಗಿಸುತ್ತಿತ್ತು. ದೊಡ್ಡಪೈಲಗುರ್ಕಿ ಗೇಟ್‌ ಸಮೀಪ ಆ ವಾಹನದೊಳಗಿನ ಪೈಪ್ ಸುರುಳಿಯೊಂದು ವಾಹನದಿಂದ ಕೆಳಗೆ ಬಿದ್ದು ಹೋಗಿತ್ತು. ಚಾಲಕ ಗಾಡಿ ನಿಲ್ಲಿಸಿ ಅದನ್ನು ಎತ್ತಿಕೊಂಡು ವಾಹನದಲ್ಲಿ ಹಾಕಲು ಮುಂದಾದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದರು.

ಲಾರಿ ವೇಗವಾಗಿ ಬರುತ್ತಿತ್ತು. ಅದರ ಚಾಲಕ ರಸ್ತೆಯಲ್ಲಿ ನಿಂತಿದ್ದ ಸರಕು ಸಾಗಣೆ ವಾಹನವನ್ನುಏಕಾಏಕಿ ಕಂಡು ಗಾಬರಿಗೊಂಡು ಡಿಕ್ಕಿ ತಪ್ಪಿಸುವ ಭರದಲ್ಲಿ ನಿಯಂತ್ರಣ ಕಳೆದುಕೊಂಡು ಪರಿಣಾಮ ಈ ಘಟನೆ ನಡೆದಿದೆ ಎಂದು ಹೇಳಿದರು.

ಅಪಘಾತದಲ್ಲಿ ಸರಕು ಸಾಗಣೆ ವಾಹನದ ಚಾಲಕ, ರಾಯಪ್ಪನಹಳ್ಳಿ ನಿವಾಸಿ ಆನಂದಾಚಾರಿ (42) ಅವರು ಮೃತಪಟ್ಟಿದ್ದಾರೆ. ವಾಹನದಲ್ಲಿ ಮತ್ತೊಬ್ಬ ವ್ಯಕ್ತಿ ಹಾಗೂ ಲಾರಿ ಚಾಲಕ ಗಾಯಗೊಂಡಿದ್ದಾರೆ. ಅವರಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು. ಚಿಕ್ಕಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !