ಮೊಬೈಲ್ ಅಂಗಡಿಯಲ್ಲಿ ಕಳ್ಳತನ

7

ಮೊಬೈಲ್ ಅಂಗಡಿಯಲ್ಲಿ ಕಳ್ಳತನ

Published:
Updated:

ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಕುಡಂಬೂರು ಗ್ರಾಮದಲ್ಲಿ ಭಾನುವಾರ ತಡರಾತ್ರಿ ಮೊಬೈಲ್‌ ಅಂಗಡಿಯೊಂದರ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ₹ 2 ಲಕ್ಷ ಮೌಲ್ಯದ ಸ್ವತ್ತುಗಳನ್ನು ಹೊತ್ತೊಯ್ದಿದ್ದಾರೆ.

ಕುಂಡಬೂರಿನಲ್ಲಿ ಮೊಬೈಲ್‌ ಅಂಗಡಿ ಹೊಂದಿರುವ ಕಿಶನ್‌ ಎಂಬುವವರು ಭಾನುವಾರ ಸಂಜೆ ವ್ಯಾಪಾರ ಮುಗಿಸಿ ಬಾಗಿಲು ಹಾಕಿಕೊಂಡು ಹೋಗಿದ್ದರು. ಸೋಮವಾರ ಬೆಳಿಗ್ಗೆ ಅಂಗಡಿಗೆ ಬಂದಾಗ ಬಾಗಿಲು ಮುರಿದಿರುವುದು ಕಾಣಿಸಿತು. ಒಳಕ್ಕೆ ಹೋಗಿ ನೋಡಿದಾಗ ಕಳವು ನಡೆದಿರುವುದು ಗೊತ್ತಾಗಿದೆ.

ಹತ್ತು ಮೊಬೈಲ್‌ಗಳು, ಮೆಮೊರಿ ಕಾರ್ಡ್‌ಗಳು, ಬ್ಲೂ ಟೂಥ್‌ ಸಾಧನಗಳು ಸೇರಿದಂತೆ ₹ 2 ಲಕ್ಷ ಮೌಲ್ಯದ ಸ್ವತ್ತುಗಳನ್ನು ಕಳವು ಮಾಡಲಾಗಿದೆ ಎಂದು ಕಿಶನ್‌ ಪಣಂಬೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !