11ರಂದು ಭತ್ತದ ನಾಟಿಗೆ ಮುಖ್ಯಮಂತ್ರಿ ಚಾಲನೆ

7

11ರಂದು ಭತ್ತದ ನಾಟಿಗೆ ಮುಖ್ಯಮಂತ್ರಿ ಚಾಲನೆ

Published:
Updated:

ಮಂಡ್ಯ: ‘ರೈತರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಆ.11ರಂದು ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದಲ್ಲಿ ಭತ್ತದ ಗದ್ದೆಗಿಳಿದು ನಾಟಿ ಮಾಡಲಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ಹೇಳಿದರು.

‘ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ಅವರಲ್ಲಿ ಆತ್ಮಸ್ಥೈರ್ಯ ಮೂಡಿಸಲು ಮುಖ್ಯಮಂತ್ರಿಗಳು ಭತ್ತದ ಸಸಿ ನಾಟಿ ಮಾಡಲಿದ್ದಾರೆ. ಆ ಮೂಲಕ ನಾಟಿ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ. ಈ ಬಾರಿ ಉತ್ತಮ ಮಳೆಯಾಗಿದ್ದು ಕೆಆರ್‌ಎಸ್‌ ಜಲಾಶಯ ತುಂಬಿದೆ. ಎಲ್ಲಾ ಕಡೆ ಭತ್ತದ ನಾಟಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮುಖ್ಯಮಂತ್ರಿಗಳು ಹರಳಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀತಾಪುರ ಗ್ರಾಮದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೂ ರೈತರ ಜೊತೆ ಇರುತ್ತಾರೆ. ನಾಟಿ ಮಾಡುವ ರೈತ ಮಹಿಳೆಯರ ಜೊತೆ ಊಟ ಮಾಡುತ್ತಾರೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಜಲಪಾತೋತ್ಸವ ಮುಂದೂಡಿಕೆ:  ‘ಸ್ಥಳೀಯ ಸಂಸ್ಥೆಗಳ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಆ.26 ಮತ್ತು 27ಕ್ಕೆ ನಿಗದಿಯಾಗಿದ್ದ ಗಗನಚುಕ್ಕಿ ಜಲಪಾತೋತ್ಸವವನ್ನು ಸೆ.15 ಮತ್ತು 16ಕ್ಕೆ ಮುಂದೂಡಲಾಗಿದೆ’ ಎಂದು ಹೇಳಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !