ಹಳಿ ದಾಟುತ್ತಿದ್ದಾಗ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು

3

ಹಳಿ ದಾಟುತ್ತಿದ್ದಾಗ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು

Published:
Updated:

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ರೈಲು ನಿಲ್ದಾಣದ ಬಳಿ ಬುಧವಾರ ಬೆಳಿಗ್ಗೆ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ.

ಕಂಕನಾಡಿ ನಿವಾಸಿ ಮುಹಮ್ಮದ್ ಕುಂಞಿ ಎಂಬುವವರ ಪುತ್ರಿ ತಬುಸ್ಸಂ (23) ಮೃತ ವಿದ್ಯಾರ್ಥಿನಿ. ಇವರು ದೇರಳಕಟ್ಟೆಯ ಫಾರ್ಮಸಿ ಕಾಲೇಜೊಂದರ ವಿದ್ಯಾರ್ಥಿನಿ. ಕಾಲೇಜಿಗೆ ಹೋಗಿ ಪರೀಕ್ಷೆಯ ಫಲಿತಾಂಶ ತಿಳಿದುಕೊಂಡು ವಾಪಸಾಗುತ್ತಿದ್ದರು. ಬೆಳಿಗ್ಗೆ 11.30ರ ಸುಮಾರಿಗೆ ತೊಕ್ಕೊಟ್ಟು ರೈಲು ನಿಲ್ದಾಣದ ಬಳಿ ಹಳಿ ದಾಟುತ್ತಿದ್ದಾಗ ರೈಲೊಂದು ಅವರ ಮೇಲೆ ಹರಿದಿದೆ.

ಮೃತದೇಹವನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉಳ್ಳಾಲ ಠಾಣೆ ಪೊಲೀಸರು ಮತ್ತು ರೈಲ್ವೆ ಸುರಕ್ಷಾ ದಳದ ಪೊಲೀಸರು ಸ್ಥಳಕ್ಕೆ ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !