ದೇವರಾಜ ಅಸರು ಜನ್ಮದಿನಾಚರಣೆ: ಸಭೆ

7

ದೇವರಾಜ ಅಸರು ಜನ್ಮದಿನಾಚರಣೆ: ಸಭೆ

Published:
Updated:
Deccan Herald

ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 103ನೇ ಜನ್ಮದಿನಾಚರಣೆಯ ಪೂರ್ವಭಾವಿ ಸಭೆ ಬುಧವಾರ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎನ್.ಅನುರಾಧಾ ಅವರ ನೇತೃತ್ವದಲ್ಲಿ ನಡೆಯಿತು.

‘ಆಗಸ್ಟ್ 20 ರಂದು ನಗರದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ದೇವರಾಜ ಅರಸು ಅವರ ಜನ್ಮಾದಿನಚರಣೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಅದಕ್ಕೆ ಪೂರ್ವಭಾವಿಯಾಗಿ ಸಂಬಂಧಪಟ್ಟ ಇಲಾಖೆಗಳು ಕಾರ್ಯಕ್ರಮದ ಸಿದ್ಧತೆ ಮಾಡಿಕೊಳ್ಳಬೇಕು. ಅರಸು ಅವರ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಜಿಲ್ಲೆಯ ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡಿ ಎಸ್ಎಸ್‌ಎಲ್‌ಸಿ ಮತ್ತು ಪಿ.ಯು.ಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ವಿತರಿಸಬೇಕು. ಎಲ್ಲ ತಾಲ್ಲೂಕುಗಳಲ್ಲಿ ಈ ಕಾರ್ಯಕ್ರಮ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ವಿಜೃಂಭಣೆಯಿಂದ ಆಚರಿಸಬೇಕು’ ಎಂದು ಹೇಳಿದರು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆರ್.ಪಿ.ದೇವಮಾನೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಯ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !