ಕನಿಷ್ಠ ವೇತನಕ್ಕೆ ಜಲಗಾರರ ಆಗ್ರಹ

7

ಕನಿಷ್ಠ ವೇತನಕ್ಕೆ ಜಲಗಾರರ ಆಗ್ರಹ

Published:
Updated:

ಚಿಕ್ಕಬಳ್ಳಾಪುರ: ‘ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಜಲಗಾರರಿಗೆ ಕೇಂದ್ರ ಸರ್ಕಾರದ ಆದೇಶದಂತೆ ಕನಿಷ್ಠ ₨18 ಸಾವಿರ ವೇತನವನ್ನು ರಾಜ್ಯ ಸರ್ಕಾರ ನೀಡಬೇಕು’ ಎಂದು ಜಲಗಾರರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಕೋಲಾರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ವಿ.ಗಂಗಾಧರ್ ಆಗ್ರಹಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅನೇಕ ಕಡೆಗಳಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಜಲಗಾರರ ಕಾರ್ಯದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಸಂಘಟಿತ ಹೋರಾಟದ ಮೂಲಕ ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು ಎನ್ನುವ ಉದ್ದೇಶಕ್ಕೆ ನೂತನವಾಗಿ ಸಂಘವನ್ನು ಸ್ಥಾಪಿಸಲಾಗಿದೆ. ಇದಕ್ಕೆ ಜಿಲ್ಲೆಯ ಜಲಗಾರರು ಹೆಸರು ನೋಂದಾಯಿಸಿಕೊಳ್ಳಬೇಕು’ ಎಂದು ತಿಳಿಸಿದರು.

‘ಕೋಲಾರ ಜಿಲ್ಲೆಯ ಅಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಬಿಸನಹಳ್ಳಿಯಲ್ಲಿ ಶುಕ್ರವಾರ (ಆ.10) ಸಂಘದ ನೂತನ ಕಚೇರಿ ಸಭೆ ಏರ್ಪಡಿಸಲಾಗಿದ್ದು, ಈ ಜಿಲ್ಲೆಯಿಂದ ಸಹ ಹೆಚ್ಚಿನ ಸಂಖ್ಯೆಯ ಜಲಗಾರರ ಆ ಸಭೆಯಲ್ಲಿ ಭಾಗವಹಿಸುವ ಮೂಲಕ ನಮ್ಮ ಹೋರಾಟಕ್ಕೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !