ವಿಜೃಂಭಣೆಯ ಕೆಂಪೇಗೌಡ ಜಯಂತಿಗೆ ನಿರ್ಧಾರ

7

ವಿಜೃಂಭಣೆಯ ಕೆಂಪೇಗೌಡ ಜಯಂತಿಗೆ ನಿರ್ಧಾರ

Published:
Updated:

ಚಿಕ್ಕಬಳ್ಳಾಪುರ: ‘ಜಿಲ್ಲಾ ಕೇಂದ್ರದಲ್ಲಿ ಶುಕ್ರವಾರ ಒಕ್ಕಲಿಗರ ಸಂಘದ ವತಿಯಿಂದ ಆಯೋಜಿಸಿರುವ ಕೆಂಪೇಗೌಡ ಜಯಂತಿಯನ್ನು ಯಶಸ್ವಿಗೊಳಿಸಲು ಎಲ್ಲ ಸಮುದಾಯದವರು ಕೈಜೋಡಿಸಬೇಕು’ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಯಲುವಹಳ್ಳಿ ಎನ್.ರಮೇಶ್ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಜಿಲ್ಲಾಡಳಿತ ಕೆಂಪೇಗೌಡ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಣೆ ಮಾಡಿದೆ. ಸಮುದಾಯದ ವತಿಯಿಂದ ಅದ್ದೂರಿಯಾಗಿ ಆಚರಿಸುವ ಉದ್ದೇಶಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿವಿಧ ಗ್ರಾಮಗಳಿಂದ 150ಕ್ಕೂ ಹೆಚ್ಚು ಅಲಂಕೃತ ಪಲ್ಲಕ್ಕಿಗಳು ನಗರದಲ್ಲಿ ಮೆರವಣಿಗೆ ನಡೆಸಲಿವೆ’ ಎಂದು ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶುಕ್ರವಾರ ಬೆಳಿಗ್ಗೆ ವಿವಿಧ ಗ್ರಾಮಗಳಿಂದ ನಗರಕ್ಕೆ ಹೂವಿನ ಪಲ್ಲಕಿಗಳು ಬರಲಿವೆ. ಮರಳು ಸಿದ್ದೇಶ್ವರಸ್ವಾಮಿ ದೇವಾಲಯದ ಬಳಿಯಿಂದ ಬಿ.ಬಿ.ರಸ್ತೆಯಲ್ಲಿರುವ ಶನೈಶ್ವರ ಸ್ವಾಮಿ ದೇವಾಲಯದ ಬಳಿ ಇರುವ ಕಾರ್ಯಕ್ರಮದ ವೇದಿಕೆ ವರೆಗೆ ಕಲಾ ತಂಡಗಳೊಂದಿಗೆ ಪಲ್ಲಕ್ಕಿಗಳ ಮೆರವಣಿಗೆ ನಡೆಯಲಿದೆ. ಇದಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಲಿದ್ದಾರೆ’ ಎಂದರು.

‘ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು, ನಾಲ್ವರು ಪ್ರಗತಿಪರ ರೈತರು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಕಾರ್ಯಕ್ರಮದಲ್ಲಿ ಸನ್ಮಾಸಲಾಗುತ್ತದೆ’ ಎಂದು ತಿಳಿಸಿದರು.

ಆ.12ಕ್ಕೆ ಶಾಸಕರಿಗೆ ಸನ್ಮಾನ
ಕೋಚಿಮುಲ್ ನಿರ್ದೇಶಕ ಕೆ.ವಿ.ನಾಗರಾಜ್ ಮಾತನಾಡಿ, ‘ಇಂಗ್ಲೆಂಡ್ ಕಿಂಗ್ಸ್ ಇಂಪಿರಿಯಲ್ ಪ್ರತಿಷ್ಠಿತ ಸಂಸ್ಥೆಯಿಂದ ಪ್ರಶಸ್ತಿ ಹಾಗೂ ಚಿನ್ನದ ಪದಕ ಪಡೆದ ಶಾಸಕ ಡಾ.ಕೆ.ಸುಧಾಕರ್ ಅವರಿಗೆ ಆ.12 ರಂದು ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಶಿವಾನಂದ ಎಸ್.ಪಾಟೀಲ್, ಸಂಸದ ವೀರಪ್ಪ ಮೊಯಿಲಿ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್.ಕೇಶವರೆಡ್ಡಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ನಗರಸಭೆ ಅಧ್ಯಕ್ಷ ಮುನಿಕೃಷ್ಣ, ಮುಖಂಡರಾದ ಪಿ.ಎ.ಮೋಹನ್, ವೆಂಕಟನಾರಾಯಣಪ್ಪ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !