ಬಯಲು ಬಹಿರ್ದೆಸೆಯಿಂದ ಸಾಂಕ್ರಾಮಿಕ ರೋಗ

7

ಬಯಲು ಬಹಿರ್ದೆಸೆಯಿಂದ ಸಾಂಕ್ರಾಮಿಕ ರೋಗ

Published:
Updated:
Deccan Herald

ಕೋಲಾರ: ‘ಗ್ರಾಮೀಣ ಜನರಲ್ಲಿ ಶೌಚಾಲಯ ಬಳಕೆ ಮತ್ತು ಸ್ವಚ್ಛತೆಯ ಅರಿವು ಮೂಡಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ನಿರ್ಣಾಯಕ’ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ನಾಗರಾಜ್ ಅಭಿಪ್ರಾಯಪಟ್ಟರು.

ಅರಾಭಿಕೊತ್ತನೂರು ಗ್ರಾಮ ಪಂಚಾಯಿತಿ, ಸರ್ಕಾರಿ ಪ್ರೌಢ ಹಾಗೂ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಗ್ರಾಮದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸ್ವಚ್ಛ ಸರ್ವೇಕ್ಷಣಾ ಅಭಿಯಾನ ಉದ್ಘಾಟಿಸಿ ಮಾತನಾಡಿ, ‘ಜಿಲ್ಲೆಯು ಶೌಚಾಲಯ ನಿರ್ಮಾಣದಲ್ಲಿ ಈಗಾಗಲೇ ಶೇ 100ರಷ್ಟು ಸಾಧನೆ ಮಾಡಿದೆ. ಆದರೆ, ಶೌಚಾಲಯ ಬಳಕೆಗೆ ಜನ ಹಿಂದೇಟು ಹಾಕುತ್ತಿದ್ದಾರೆ’ ಎಂದರು.

‘ಬಯಲು ಬಹಿರ್ದೆಸೆಯಿಂದ ಸಾಂಕ್ರಾಮಿಕ ರೋಗಗಳು ಬರುತ್ತವೆ. ಕುಡಿಯುವ ನೀರಿನ ಮೂಲಗಳಲ್ಲಿ ಕೊಳಕು ಸೇರ್ಪಡೆಯಾಗುತ್ತದೆ. ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಸ್ವಾಭಿಮಾನಿ ಬದುಕಿಗೆ ಧಕ್ಕೆಯಾಗುತ್ತದೆ. ಆದ ಕಾರಣ ವಿದ್ಯಾರ್ಥಿಗಳು ಶೌಚಾಲಯ ಬಳಕೆ ಬಗ್ಗೆ ಪೋಷಕರಿಗೆ ಅರಿವು ಮೂಡಿಸಬೇಕು’ ಎಂದು ಕಿವಿಮಾತು ಹೇಳಿದರು.

‘ವಿದ್ಯಾರ್ಥಿಗಳು ಮನೆ, ಸುತ್ತಮತ್ತಲ ಪರಿಸರ, ಚರಂಡಿಗಳು, ಶಾಲಾ ಆವರಣದ ಸ್ವಚ್ಛತೆಗೆ ಒತ್ತು ನೀಡಬೇಕು. ಶಾಲೆಯ ಖಾಲಿ ಜಾಗದಲ್ಲಿ ಗಿಡಗಳನ್ನು ಬೆಳೆಸಬೇಕು. ಶಿಕ್ಷಕರು ಮಕ್ಕಳಲ್ಲಿ ಪರಿಸರ ಕಾಳಜಿ ಬೆಳೆಸಬೇಕು. ಪರಿಸರಕ್ಕೆ ಹಾನಿಕಾರಕವಾದ ಪ್ಲಾಸ್ಟಿಕ್‌ ಉತ್ಪನ್ನಗಳ ಬಳಕೆಗೆ ಕಡಿವಾಣ ಹಾಕಬೇಕು’ ಎಂದು ಸಲಹೆ ನೀಡಿದರು.

ಪ್ರೌಢ ಶಾಲೆ ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್‌ಕುಮಾರ್‌, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಎನ್.ಸುಮಾ, ಶಿಕ್ಷಕರಾದ ಎಸ್.ಅನಂತಪದ್ಮನಾಭ್, ಶ್ವೇತಾ, ಸುಗುಣಾ, ಗ್ರಾ.ಪಂ ಕಾರ್ಯದರ್ಶಿ ಮಲ್ಲಿಕಾರ್ಜುನಯ್ಯ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಮಂಜುನಾಥ್ ಪಾಲ್ಗೊಂಡಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !