‘ಸೌಲಭ್ಯ ಕೊಡಿಸಲು ಸಿದ್ದರಾಮಯ್ಯ ವಿಫಲ’

7

‘ಸೌಲಭ್ಯ ಕೊಡಿಸಲು ಸಿದ್ದರಾಮಯ್ಯ ವಿಫಲ’

Published:
Updated:
Deccan Herald

ರಾಯಚೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಆಯ್ಕೆಯಾದ ಬಾದಾಮಿ ಕ್ಷೇತ್ರಕ್ಕೆ ಸರ್ಕಾರದಿಂದ ಸೌಲಭ್ಯಗಳನ್ನು ಕೊಡಿಸುವಲ್ಲಿ ಅವರು ವಿಫಲವಾಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಪತ್ರ ಬರೆದು ಸೌಲಭ್ಯ ಕೇಳುವ ಸ್ಥಿತಿಯಲ್ಲಿದ್ದಾರೆ. ಪತ್ರಗಳಲ್ಲಿ ಕೇಳಿದ ಯಾವ ಬೇಡಿಕೆಗಳು ಈಡೇರಿಲ್ಲ ಎಂದು ಕುಟುಕಿದರು.

ಬಿಜೆಪಿ ವಿರುದ್ಧ ಜಿದ್ದಾಜಿದ್ದಿನ ಚುನಾವಣೆ ಮಾಡುವುದಾಗಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ‘ವಿಧಾನಸಭೆ ಚುನಾವಣೆಯಲ್ಲಿ ನಾನು ಬಾದಾಮಿಗೆ ಮತ್ತೆ ಅರ್ಧದಿನ ಹೋಗಿದ್ದರೆ ಸಿದ್ದರಾಮಯ್ಯ ವಿಧಾನಸಭೆಗೆ ಬರುತ್ತಿರಲಿಲ್ಲ. ಅವರಿಂದ ಬಿಜೆಪಿ ಯಾವುದೇ ಸಹಕಾರವನ್ನು ಬಯಸಿಲ್ಲ’ ಎಂದರು.

'ಸಾಲಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದಿನಕ್ಕೊಂದು ಹೇಳಿಕೆ ನೀಡಿ ಗೊಂದಲ ಮೂಡಿಸುತ್ತಿದ್ದಾರೆ ಸಹಕಾರ ಬ್ಯಾಂಕ್‌ಗಳಲ್ಲಿ ಒಂದು ಲಕ್ಷದವರೆಗಿನ ಸಾಲಮನ್ನಾ ಘೋಷಿಸಿದ್ದಾರೆ. ಕೂಡಲೇ ಸಹಕಾರಿ ಬ್ಯಾಂಕುಗಳಿಗೆ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಸಹಕಾರಿ ಬ್ಯಾಂಕ್‌ಗಳು ಉಳಿಯುವುದಿಲ್ಲ' ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌, ಶಾಸಕರಾದ ಡಾ.ಶಿವರಾಜ ಪಾಟೀಲ, ಶಿವನಗೌಡ ನಾಯಕ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !