ಮಹಿಳಾ ಕಾಲೇಜಿಗೆ ಹೋಂಡಾ ಕಂಪನಿ ನೆರವು

7

ಮಹಿಳಾ ಕಾಲೇಜಿಗೆ ಹೋಂಡಾ ಕಂಪನಿ ನೆರವು

Published:
Updated:
Deccan Herald

ಕೋಲಾರ: ನಗರದ ಸರ್ಕಾರಿ ಮಹಿಳಾ ಕಾಲೇಜಿಗೆ ಇತ್ತೀಚೆಗೆ ಭೇಟಿ ನೀಡಿದ ಹೋಂಡಾ ಕಂಪನಿ ಆಡಳಿತ ಮಂಡಳಿ ಸದಸ್ಯರು ಕಾರ್ಪೊರೇಟ್‌ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆಯಡಿ ಕಾಲೇಜಿನ ಮೂಲಸೌಕರ್ಯ ಅಭಿವೃದ್ಧಿ ಹಾಗೂ ರಂಗಮಂದಿರ ನಿರ್ಮಾಣಕ್ಕೆ ₹ 25 ಲಕ್ಷ ಹಣಕಾಸು ನೆರವು ನೀಡುವುದಾಗಿ ಘೋಷಿಸಿದರು.

ಹೋಂಡಾ ಕಂಪನಿ ಆಡಳಿತ ಮಂಡಳಿ ಸದಸ್ಯರಾದ ಶರತ್ ಪ್ರಧಾನ್ ಹಾಗೂ ಶ್ರೀಹರಿ ಕಾಲೇಜಿನ ಸಮಸ್ಯೆಗಳನ್ನು ಪರಿಶೀಲಿಸಿ, ‘ಉನ್ನತ ಶಿಕ್ಷಣದ ಕನಸಿನೊಂದಿಗೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಮೂಲಸೌಕರ್ಯ ಕಲ್ಪಿಸುವ ಅಗತ್ಯವಿದೆ’ ಎಂದರು.

‘ಕಾಲೇಜಿನಲ್ಲಿ 3,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆಗೆ ಹೋಲಿಸಿದರೆ ಕೊಠಡಿಗಳ ಸಂಖ್ಯೆ ಕಡಿಮೆಯಿದೆ. ಜತೆಗೆ ಹೆಚ್ಚಿನ ಶೌಚಾಲಯಗಳಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಕಾಲೇಜಿಗೆ ಆರ್ಥಿಕ ನೆರವು ನೀಡಿದರೆ ಅನುಕೂಲವಾಗುತ್ತದೆ’ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜೇಂದ್ರ ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಹೋಂಟಾ ಕಂಪನಿ ಆಡಳಿತ ಮಂಡಳಿ ಸದಸ್ಯರು, ‘ಶೌಚಾಲಯಗಳು ಹಾಗೂ ರಂಗಮಂದಿರ ನಿರ್ಮಿಸಿ ಕೊಡುತ್ತೇವೆ. ಕಾಲೇಜಿನ ಸರ್ವತ್ತೋಮುಖ ಅಭಿವೃದ್ಧಿಗೆ ಮತ್ತಷ್ಟು ನೆರವು ನೀಡುತ್ತೇವೆ. ಗ್ರಾಮೀಣ ಮಕ್ಕಳ ಉನ್ನತ ಶಿಕ್ಷಣದ ಕನಸು ನನಸು ಮಾಡಲು ಕಂಪನಿ ಸಿದ್ಧವಿದೆ’ ಎಂದು ಭರವಸೆ ನೀಡಿದರು.

ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ವಿಜಯ್‌ಕುಮರ್, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಸೀನಾನಾಯಕ್, ಪ್ರಾಧ್ಯಾಪಕರಾದ ಅಶ್ವತ್ಥ್‌, ಸೀನಪ್ಪ, ಎಚ್.ಆರ್.ಮಂಜುನಾಥ್, ವ್ಯವಸ್ಥಾಪಕ ಗೋಪಿನಾಥ್ ಹಾಜರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !