ತಪ್ಪದೆ ಇಂದ್ರಧನುಷ್ ಲಸಿಕೆ ಹಾಕಿಸಿ

7

ತಪ್ಪದೆ ಇಂದ್ರಧನುಷ್ ಲಸಿಕೆ ಹಾಕಿಸಿ

Published:
Updated:
Deccan Herald

ಚಿಕ್ಕಬಳ್ಳಾಪುರ: ‘ಎರಡು ವರ್ಷದ ಆರು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಮತ್ತು ಎಲ್ಲಾ ಗರ್ಭಿಣಿಯರಿಗೆ ಏಳು ಮಾರಕ ರೋಗಗಳಿಂದ ರಕ್ಷಿಸುವ ಇಂದ್ರಧನುಷ್ ಲಸಿಕೆಯನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಹಾಕಿಸಬೇಕು’ ಎಂದು ಜಿಲ್ಲಾಧಿಕಾರಿ ಪಿ.ಅನಿರುದ್ಧ್ ಶ್ರವಣ್ ತಿಳಿಸಿದರು.

ನಗರದ ಕಂದವಾರದಲ್ಲಿರುವ ಎ.ಎನ್.ಎಂ ತರಬೇತಿ ಕೇಂದ್ರದಲ್ಲಿ ಇತ್ತೀಚೆಗೆ ‘ಗ್ರಾಮ ಸ್ವರಾಜ್ ಅಭಿಯಾನ’ದ ಅಡಿ ಆಯೋಜಿಸಿದ್ದ ‘ಇಂದ್ರಧನುಷ್ ಲಸಿಕಾ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.

‘ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಇಂದ್ರಧನುಷ್ ಲಸಿಕೆ ನಾಯಿ ಕೆಮ್ಮು, ಧನುರ್ವಾಯು, ಗಂಟಲಮಾರಿ, ಬಾಲಕ್ಷಯ, ದಢಾರ, ಮೆದುಳು ಜ್ವರ, ಕಾಮಾಲೆಯಂತಹ ರೋಗಗಳ ನಿಯಂತ್ರಿಸುತ್ತದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಈ ಕಾರ್ಯಕ್ರಮದ ಪ್ರಯೋಜನವರು ಸಾರ್ವಜನಿಕರು ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

‘ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಈ ಲಸಿಕೆ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಪ್ರಚಾರ ಮಾಡುವ ಜತೆಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ಆ ಮೂಲಕ ಜಿಲ್ಲೆಯಲ್ಲಿ ಯೋಜನೆ ಉತ್ತಮ ಪ್ರಗತಿ ಸಾಧಿಸಲು ಕೈಜೋಡಿಸಬೇಕು’ ಎಂದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರವಿಶಂಕರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಿತ್ರಣ್ಣ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಜಿ.ಹರೀಶ್ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !