ಸಂವಿಧಾನದ ಪ್ರತಿ ಸುಟ್ಟ ಪ್ರಕರಣ: 18ಕ್ಕೆ ಪ್ರತಿಭಟನೆ

7

ಸಂವಿಧಾನದ ಪ್ರತಿ ಸುಟ್ಟ ಪ್ರಕರಣ: 18ಕ್ಕೆ ಪ್ರತಿಭಟನೆ

Published:
Updated:

ಕೋಲಾರ: ‘ಸಂವಿಧಾನದ ಪ್ರತಿ ಸುಟ್ಟು ಅಂಬೇಡ್ಕರ್‌ ವಿರುದ್ಧ ಘೋಷಣೆ ಕೂಗಿದ ಯೂತ್ ಫರ್ ಇಕ್ವಾಲಿಟಿ ಸಂಘಟನೆ ಸದಸ್ಯರನ್ನು ಬಂಧಿಸಿ ಸಂಘಟನೆಯನ್ನು ನಿರ್ಬಂಧಿಸುವಂತೆ ಒತ್ತಾಯಿಸಿ ನಗರದಲ್ಲಿ ಆ.18ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ರಾಜ್ಯ ದಲಿತ ಮತ್ತು ಅಲ್ಪಸಂಖ್ಯಾತರ ಒಕ್ಕೂಟದ ಅಧ್ಯಕ್ಷ ನಾರಾಯಣಸ್ವಾಮಿ ತಿಳಿಸಿದರು.

ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಪ್ರಕರಣ ನಡೆದು ಒಂದು ವಾರವಾಗಿದೆ. ಆದರೆ, ಈವರೆಗೂ ಆರೋಪಿಗಳನ್ನು ಬಂಧಿಸಿಲ್ಲ. ಕೇಂದ್ರ ಸರ್ಕಾರವು ಪೊಲೀಸರು ಮೇಲೆ ಒತ್ತಡ ತಂದು ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದೆ’ ಎಂದು ಆರೋಪಿಸಿದರು.

‘18ರಂದು ಬೆಳಿಗ್ಗೆ 10ಕ್ಕೆ ದರ್ಗಾ ಮೊಹಲ್ಲಾದಲ್ಲಿ ಅಂಬೇಡ್ಕರ್‌ ಮತ್ತು ಟಿಪ್ಪು ಸುಲ್ತಾನ್‌ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತದೆ. ಸಂವಿಧಾನದ ಪ್ರತಿ ಸುಟ್ಟಿರುವ ಕಿಡಿಗೇಡಿಗಳನ್ನು ಬಂಧಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಲಾಗುತ್ತದೆ’ ಎಂದು ಟಿಪ್ಪು ಸೆಕ್ಯೂಲರ್‌ ಸೇನೆ ಅಧ್ಯಕ್ಷ ಸೈಯದ್ ಆಸೀಫ್ ಹೇಳಿದರು.

‘ವಿವಿಧ ಸಂಘಟನೆಗಳ ಸದಸ್ಯರು ಭಾಗವಹಿಸುತ್ತಾರೆ. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ವೃತ್ತ, ಕಾಳಮ್ಮ ಗುಡಿ ರಸ್ತೆ, ದೊಡ್ಡಪೇಟೆ ವೃತ್ತ, ಅಮ್ಮವಾರಿಪೇಟೆ ವೃತ್ತ, ಮೆಕ್ಕೆ ವೃತ್ತದ ಮಾರ್ಗವಾಗಿ ಮೆರವಣಿಗೆ ನಡೆಸಿ ಮಿನಿ ವಿಧಾನಸೌಧ ಎದುರು ಪ್ರತಿಭಟನೆ ಮಾಡುತ್ತೇವೆ. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುತ್ತೇವೆ’ ಎಂದು ವಿವರಿಸಿದರು.

ಒಕ್ಕೂಟದ ಸದಸ್ಯರಾದ ಇಮ್ರಾನ್‌ಖಾನ್‌, ಪ್ರಕಾಶ್, ರಾಜ್‌ಕುಮಾರ್, ನಾಗವೇಣಿ, ಮಂಜುಳಾ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !