ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ: ವೀರಪ್ಪ ಮೊಯಿಲಿ

7
'ಯಾರು ಮುಖ್ಯಮಂತ್ರಿಯಾಗಬೇಕು ಎಂಬ ಚರ್ಚೆಯೇ ಅಪ್ರಸ್ತುತ'

ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ: ವೀರಪ್ಪ ಮೊಯಿಲಿ

Published:
Updated:

ಚಿಕ್ಕಬಳ್ಳಾಪುರ: ‘ಸದ್ಯ ಬೇರೆಯವರು ಮುಖ್ಯಮಂತ್ರಿಯಾಗಲು ಐದು ವರ್ಷಗಳ ವರೆಗೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ನಾವು ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಬೇಕು ಎಂದು ಈಗಾಗಲೇ ಹೇಳಿಯಾಗಿದೆ. ಆ ಚರ್ಚೆಯೇ ಅಪ್ರಸ್ತುತ’ ಎಂದು ಸಂಸದ ವೀರಪ್ಪ ಮೊಯಿಲಿ ಹೇಳಿದರು.

ತಾಲ್ಲೂಕಿನ ನಂದಿಬೆಟ್ಟದಲ್ಲಿ ಶನಿವಾರ ಆಯೋಜಿಸಿದ್ದ ‘ನಂದಿಸಂತೆ’ಗೆ ಚಾಲನೆ ನೀಡಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಚಿಕ್ಕಬಳ್ಳಾಪುರದ ಜನ ನನಗೆ ಎರಡು ಬಾರಿ ಆಶೀರ್ವಾದ ಮಾಡಿದ್ದಾರೆ. ಮೂರನೇ ಬಾರಿ ಸಹ ನಾನು ಇಲ್ಲಿಯೇ ಸ್ಪರ್ಧೆ ಮಾಡುತ್ತೇನೆ. ರಾಜ್ಯದಲ್ಲಿ 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ಒಂಬತ್ತು ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ. ಈ ಬಾರಿಯೂ ನಾವು ಆ ಕ್ಷೇತ್ರಗಳನ್ನು ಬಿಟ್ಟು ಕೊಡುವುದಿಲ್ಲ. ಉಳಿದ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಯಬೇಕಿದೆ’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !