ವಿದ್ಯಾರ್ಥಿ ವೇತನಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

7
-

ವಿದ್ಯಾರ್ಥಿ ವೇತನಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Published:
Updated:
Deccan Herald

ಬಾಗಲಕೋಟೆ: ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮತ್ತು ಫೆಲೋಶಿಪ್‌ಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಶನಿವಾರ ನಗರದಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಬಿ.ವಿ.ವಿ ಸಂಘದ ಬಸವೇಶ್ವರ ಕಾಲೇಜು ಕ್ಯಾಂಪಸ್‌ನಿಂದ ಮೆರವಣಿಗೆಯಲ್ಲಿ ಬಂದ ವಿದ್ಯಾರ್ಥಿಗಳು, ಬಸವೇಶ್ವರ ವೃತ್ತದಲ್ಲಿ ಜಮಾವಣೆಗೊಂಡರು. ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದರಿಂದ ಕೆಲ ಕಾಲ ರಸ್ತೆ ಸಂಚಾರಕ್ಕೆ ಅಡ್ಡಿಯಾಯಿತು.

ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿಗಳಿಗೆ 15 ದಿನಗಳ ಒಳಗಾಗಿ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು. ಈ ಹಿಂದೆ 2003ರಲ್ಲಿ ವಿದ್ಯಾರ್ಥಿ ವೇತನದ ಮೊತ್ತವನ್ನು ಹೆಚ್ಚಿಸಲಾಗಿದ್ದು, ನಂತರದ 15 ವರ್ಷಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಹಾಗಾಗಿ ಹಣದುಬ್ಬರಕ್ಕೆ ತಕ್ಕಂತೆ ವಿದ್ಯಾರ್ಥಿಗಳ ವೇತನವನ್ನು ಹೆಚ್ಚಿಸಬೇಕು. ಪ್ರತಿ ವಿದ್ಯಾರ್ಥಿಗೆ ವರ್ಷಕ್ಕೆ ₹12000 ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.

ಸದ್ಯ ರಾಜೀವ್‌ಗಾಂಧಿ ಫೆಲೋಶಿಪ್ ಕೇವಲ 2000 ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಫಲಾನುಭವಿಗಳ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ದೇಶಾದ್ಯಂತ ವಿದ್ಯಾರ್ಥಿ ನಿಲಯಗಳ ಸ್ಥಾಪನೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ವಿಭಾಗ ಸಂಚಾಲಕ ಸಂತೋಷ ಹೂಗಾರ, ಸಹ ಕಾರ್ಯದರ್ಶಿ ಗಿರೀಶ ಸುನಗ, ನಗರ ಕಾರ್ಯದರ್ಶಿ ಯಮುನಾ ಚಲವಾದಿ, ಶ್ರೀಶೈಲ, ಹಣಮಂತ, ದೀಪಕ್, ಈರಣ್ಣಾ ಮತ್ತಿತರರು ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !