ನವೋದಯ ವಿದ್ಯಾಲಯಕ್ಕೆ ಮೂಲಸೌಕರ್ಯ: ಭರವಸೆ

7

ನವೋದಯ ವಿದ್ಯಾಲಯಕ್ಕೆ ಮೂಲಸೌಕರ್ಯ: ಭರವಸೆ

Published:
Updated:

ಕೋಲಾರ: ‘ಜಿಲ್ಲೆಯಲ್ಲಿ ಜವಾಹರ್‌ ನವೋದಯ ವಿದ್ಯಾಲಯವು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆರಂಭವಾಗಿದ್ದು, ತಾತ್ಕಾಲಿಕವಾಗಿ ಭವನದಲ್ಲಿ ನಡೆಯುತ್ತಿದೆ. ವಿದ್ಯಾಲಯಕ್ಕೆ ಸ್ವಂತ ಕಟ್ಟಡ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಭರವಸೆ ನೀಡಿದರು.

ಇಲ್ಲಿ ಸೋಮವಾರ ನಡೆದ ಜವಾಹರ್ ನವೋದಯ ವಿದ್ಯಾಲಯ ನಿರ್ವಹಣೆ ಮತ್ತು ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿ, ‘ವಿದ್ಯಾಲಯದಲ್ಲಿ ಮೂಲಸೌಕರ್ಯ ಸಮಸ್ಯೆಯಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ತೊಂದರೆಯಾಗುತ್ತಿದೆ’ ಎಂದರು.

‘ವಿದ್ಯಾಲಯದಲ್ಲಿ ಶೌಚಾಲಯ ನಿರ್ಮಿಸುವ ಸಂಬಂಧ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜತೆ ಚರ್ಚಿಸಲಾಗಿದೆ. ಚಿಕ್ಕಹಸಾಳ ಗ್ರಾಮ ಪಂಚಾಯಿತಿ ವತಿಯಿಂದ ಶೌಚಾಲಯ ಳನ್ನು ಹಾಗೂ ಸ್ನಾನದ ಗೃಹಗಳನ್ನು ನಿರ್ಮಿಸಲಾಗುತ್ತದೆ. ವಿದ್ಯಾಲಯದ ಮೂಲಸೌಕರ್ಯ ಸಮಸ್ಯೆಯನ್ನು ಸದ್ಯದಲ್ಲೇ ಬಗೆಹರಿಸಲಾಗುತ್ತದೆ’ ಎಂದು ತಿಳಿಸಿದರು.

‘ವಿದ್ಯಾಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 40 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾತಿ ನೀಡಲಾಗಿದೆ. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳ ದಾಖಲಾತಿಗೆ ಅಗತ್ಯವಿರುವ ಕೊಠಡಿ ಹಾಗೂ ವಸತಿ ಸೌಲಭ್ಯ ಒದಗಿಸಲು ಜಿಲ್ಲಾಡಳಿತ ಸಿದ್ಧವಿದೆ. ಹೀಗಾಗಿ ಮತ್ತೊಮ್ಮೆ ವಿದ್ಯಾರ್ಥಿಗಳ ಆಯ್ಕೆಪಟ್ಟಿ ಸಲ್ಲಿಸಿ’ ಎಂದು ವಿದ್ಯಾಲಯದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆ ಬಳಿಕ ವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು. ವಿದ್ಯಾಲಯದ ಪ್ರಾಂಶುಪಾಲ ಎ.ಸಿ.ಎಸ್.ರೆಡ್ಡಿ, ಸಮಿತಿ ಸದಸ್ಯರು ಹಾಗೂ ಶಿಕ್ಷಕರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !