ಸೆ.9ರಂದು ಪ್ರತಿಭಾ ಪುರಸ್ಕಾರ ಸಮಾರಂಭ

7

ಸೆ.9ರಂದು ಪ್ರತಿಭಾ ಪುರಸ್ಕಾರ ಸಮಾರಂಭ

Published:
Updated:

ಕೋಲಾರ: ‘ಸಂಘದ ವತಿಯಿಂದ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಸೆ.9ರಂದು ಬೆಳಿಗ್ಗೆ 10.30ಕ್ಕೆ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ’ ಎಂದು ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಮುನಿರಾಜು ತಿಳಿಸಿದರು.

ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸಹಕಾರ ಸಚಿವ ಬಂಡೆಪ್ಪ ಕಾಶಂಪುರ ಸಮಾರಂಭ ಉದ್ಘಾಟಿಸಲಿದ್ದು, ಮಾಜಿ ಶಾಸಕ ವರ್ತೂರು ಪ್ರಕಾಶ್ ಅಧ್ಯಕ್ಷತೆ ವಹಿಸುತ್ತಾರೆ. ಕಾಗಿನೆಲೆ ಸಂಸ್ಥಾನದ ಈಶ್ವರಾನಂದಪುರಿ ಸ್ವಾಮೀಜಿ ಸಾನಿಧ್ಯ ವಹಿಸುತ್ತಾರೆ’ ಎಂದರು.

‘ಅರಣ್ಯ ಸಚಿವ ಆರ್.ಶಂಕರ್, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ನಗರಸಭೆ ಅಧ್ಯಕ್ಷೆ ಮಹಾಲಕ್ಷ್ಮಿ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಚಿಕ್ಕಹನುಮಪ್ಪ ಭಾಗವಹಿಸುತ್ತಾರೆ’ ಎಂದು ಮಾಹಿತಿ ನೀಡಿದರು.

‘ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಗಳಿಸಿದ 120 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಡಾ.ಶೀಲಾ, ಡಾ.ಎಚ್.ಮಧುಚಂದ್ರ, ಡಾ.ಎಂ.ಎಸ್.ಮಹೇಶ್, ರವಣಪ್ಪ, ಡಾ.ಅಶ್ವಿನಿ ಮತ್ತು ಮಹದೇವಪ್ಪ ಪೂಜಾರ್‌ ಅವರನ್ನು ಪುರಸ್ಕರಿಸಲಾಗುತ್ತದೆ’ ಎಂದು ವಿವರಿಸಿದರು.

ಜಿಲ್ಲಾ ಕುರುಬರ ಸಂಘದ ಪದಾಧಿಕಾರಿಗಳಾದ ಮುನಿಯಪ್ಪ, ನಾಗಭೂಷಣ್, ಎನ್.ಗೋವಿಂದಪ್ಪ, ನಾಗರಾಜ್, ಚಂದ್ರಶೇಖರ್, ಮುನೇಗೌಡ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !