ಎಂಡೋ ಸಂತ್ರಸ್ತರಿಗೆ ಪರಿಹಾರ: ವರದಿ ಕೇಳಿದ ಸಿಎಂ

7

ಎಂಡೋ ಸಂತ್ರಸ್ತರಿಗೆ ಪರಿಹಾರ: ವರದಿ ಕೇಳಿದ ಸಿಎಂ

Published:
Updated:

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್‌ನಿಂದ ಸಂಕಷ್ಟಕ್ಕೀಡಾಗಿರುವ ಕುಟುಂಬಗಳಿಗೆ ಶಾಶ್ವತ ಪರಿಹಾರ ಒದಗಿಸುವ ದಿಸೆಯಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ‘ಎಂಡೋ ಸಂತ್ರಸ್ತರ ಕುಟುಂಬಗಳಿಗೆ ಶಾಶ್ವತವಾದ ಅನುಕೂಲ ಕಲ್ಪಿಸಬೇಕೆಂಬ ತೀರ್ಮಾನ ಮಾಡಿದ್ದೇನೆ. ಅಂತಹ ಎಲ್ಲ ಕುಟುಂಬಗಳ ಸಮಗ್ರ ವಿವರವುಳ್ಳ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ’ ಎಂದರು.

ಪ್ರವಾಹ ಮತ್ತು ಭೂಕುಸಿತದಿಂದ ತೊಂದರೆಗೆ ಸಿಲುಕಿರುವ ಕುಟುಂಬಗಳ ಪುನರ್ವಸತಿಗೂ ಯೋಜನೆ ಸಿದ್ಧವಾಗುತ್ತಿದೆ. ಹಿಂದಿನ ಜನವಸತಿಗಳಲ್ಲಿ ಪುನಃ ಜನರು ವಾಸಿಸಬಾರದು ಎಂಬ ವರದಿಗಳು ಬಂದರೆ ಅಂತಹ ಕುಟುಂಬಗಳನ್ನು ಸ್ಥಳಾಂತರ ಮಾಡಲಾಗುವುದು. ದುರ್ಘಟನೆಯ ವೈಜ್ಞಾನಿಕ ವಿಶ್ಲೇಷಣೆ ನಡೆಯುತ್ತಿದೆ. ವರದಿ ಬಂದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬೆಂಗಳೂರು– ಮಂಗಳೂರು ಸಂಪರ್ಕ ರಸ್ತೆಗಳಲ್ಲಿ ಬಹುತೇಕ ವಾಹನ ಸಂಚಾರ ಸ್ಥಗಿತಗೊಂಡಿದೆ. ಮಳೆಯಿಂದ ಹಾನಿಯಾಗಿರುವ ರಸ್ತೆಗಳನ್ನು ದುರಸ್ತಿಗೊಳಿಸುವ ಕೆಲಸ ನಡೆಯುತ್ತಿದೆ. ಸಕಲೇಶಪುರದಿಂದ ಮಂಗಳೂರಿನವರೆಗೆ ಯಾವುದೇ ಕಾಲದಲ್ಲೂ ಸಂಚಾರಕ್ಕೆ ಅಡಚಣೆಯಾಗದ ರೀತಿಯಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !