ಬಸ್‌ ವ್ಯವಸ್ಥೆಗೆ ಆಗ್ರಹಿಸಿ ಭಕ್ತರ ಪ್ರತಿಭಟನೆ

7
ರಾಷ್ಟ್ರೀಯ ಹೆದ್ದಾರಿ 209ರ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಪ್ರಯಾಣಿಕರು

ಬಸ್‌ ವ್ಯವಸ್ಥೆಗೆ ಆಗ್ರಹಿಸಿ ಭಕ್ತರ ಪ್ರತಿಭಟನೆ

Published:
Updated:
Deccan Herald

ಕೊಳ್ಳೇಗಾಲ: ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಲು ಬಸ್‌ ವ್ಯವಸ್ಥೆ ಕಲ್ಪಿಸದೇ ಇರುವುದನ್ನು ಖಂಡಿಸಿ ಭಕ್ತರು ರಾಷ್ಟ್ರೀಯ ಹೆದ್ದಾರಿ 209ರ ತಡೆ ನಡೆಸಿ ಪ್ರತಿಭಟಿಸಿದರು.

ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಎಣ್ಣೆ ಮಜ್ಜನ ಸೇವೆಗೆ ತೆರಳಲು ಹೆಚ್ಚಿನ ಭಕ್ತರು ನಗರದ ಹೊಸ ಅಣಗಳ್ಳಿ ಸಮೀಪವಿರುವ ತಾತ್ಕಾಲಿಕ ಬಸ್‌ ನಿಲ್ದಾಣಕ್ಕೆ ಬಂದರು. ಆದರೆ, ಬಸ್‌ಗಳ ಕೊರತೆಯಿಂದಾಗಿ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು. ಖಾಸಗಿ ಬಸ್‌ಗಳ ನಿಲುಗಡೆಗೆ ಬೇರೆಡೆ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಖಾಸಗಿ ಬಸ್‌ಗಳಿಗೂ ಹೋಗಲು ಸಾಧ್ಯವಾಗದೆ ಪರದಾಡಿದರು.

ವಿಶೇಷ ಸಂದರ್ಭಗಳಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾವಿರಾರು ಮಂದಿ ಭೇಟಿ ನೀಡುತ್ತಾರೆ. ಅಂತಹ ಸಂದರ್ಭಗಳಲ್ಲಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಬೇಕು. ಆದರೆ, ಕೆಎಸ್‌ಆರ್‌ಟಿಸಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಾರೆ. ಇದರಿಂದ, ಪ್ರಯಾಣಿಕರು ಹಾಗೂ ಭಕ್ತರಿಗೆ ಸಮಸ್ಯೆ ಉಂಟಾಗುತ್ತಿದೆ ಎಂದು ದೂರಿದರು.

ತಾತ್ಕಾಲಿಕ ಬಸ್‍ ನಿಲ್ದಾಣದಲ್ಲಿ ಯಾವುದೇ ಮೂಲಸೌಕರ್ಯ ಇಲ್ಲ. ಕುಡಿಯಲು ನೀರು, ಶೌಚಾಲಯದ ವ್ಯವಸ್ಥೆ ಇಲ್ಲ. ಭದ್ರತೆಯಂತೂ ಮೊದಲೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಸ್ ನಿಲ್ದಾಣದಲ್ಲಿರುವ ಟಿಸಿಯನ್ನು ವಿಚಾರಿಸಿದರೆ ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ ಆರೋಪಿಸಿದರು. ಬಸ್‌ಗಳು ಬಂದ ಬಳಿಕ ಪ್ರತಿಭಟನೆಯನ್ನು ಹಿಂಪಡೆದರು.

ಪ್ರತಿಭಟನೆಯಲ್ಲಿ ಚಂಚಹಳ್ಳಿ ಚಿಕ್ಕಸ್ವಾಮಿ, ಶೇಖರ್, ಶಿವಕುಮಾರ್, ನಂಜನಗೂಡು ಸುರೇಶ್, ಮದ್ದೂರು ಮಲ್ಲೇಶ್, ರಮೇಶ್ ಸೇರಿದಂತೆ ನೂರಾರು ಮಂದಿ ಭಕ್ತರು ಇದ್ದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !