ಗೋಪಾಲಸ್ವಾಮಿ ಬೆಟ್ಟಕ್ಕೆ ಹೆಚ್ಚಿನ ಭಕ್ತರು

7

ಗೋಪಾಲಸ್ವಾಮಿ ಬೆಟ್ಟಕ್ಕೆ ಹೆಚ್ಚಿನ ಭಕ್ತರು

Published:
Updated:
Deccan Herald

ಗುಂಡ್ಲುಪೇಟೆ: ಶ್ರಾವಣ ಮಾಸದ ಕೊನೆಯ ಶನಿವಾರ ಹಿಮವಾದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹೆಚ್ಚಿನ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದರು.

ದೇವಸ್ಥಾನವನ್ನು ವಿವಿಧ ಹೂವು ಹಾಗೂ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ವಿಶೇಷ ಪೂಜೆಗಳು ನಡೆದವು. ದೇವರ ದರ್ಶನ ಪಡೆಯಲು ಭಕ್ತರು ಸಾಲುಗಟ್ಟಿ ನಿಂತಿದ್ದರು.

ಪಟ್ಟಣದ ಬಸ್ ನಿಲ್ದಾಣದಿಂದ ಬೆಳಿಗ್ಗೆ 7ರಿಂದಲೇ ಬಸ್‍ಗಳ ವ್ಯವಸ್ಥೆ ಮಾಡಲಾಗಿತ್ತು. ಖಾಸಗಿ ವಾಹನದಲ್ಲಿ ಹೋಗುವವರು ಬೆಟ್ಟದ ಪಾದದ ಬಳಿ ಇರುವ ಚೆಕ್‌ಪೋಸ್ಟ್ ಬಳಿ ವಾಹನವನ್ನು ನಿಲ್ಲಿಸಿ ಅಲ್ಲಿಂದ ಬಸ್‍ನಲ್ಲಿ ಹೋಗಲು ವ್ಯವಸ್ಥೆ ಮಾಡಲಾಗಿತ್ತು.

ಸಬ್‌ ಇನ್‌ಸ್ಪೆಕ್ಟರ್ ಶಿವರುದ್ರ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿತ್ತು. ಅರಣ್ಯ ಇಲಾಖೆಯವರು ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿದ್ದರು.

 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !