ಸಮಯ ಪೋಲು ಮಾಡುವುದು ಸಲ್ಲದು

7
ಮಹೇಶ್ವರಿ ನಿರ್ವಹಣೆ ಮತ್ತು ವಿಜ್ಞಾನ ಸಂಸ್ಥೆ ವತಿಯಿಂದ ಬಿಎ, ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

ಸಮಯ ಪೋಲು ಮಾಡುವುದು ಸಲ್ಲದು

Published:
Updated:
Deccan Herald

ಚಿಕ್ಕಬಳ್ಳಾಪುರ: ‘ವಿದ್ಯಾರ್ಥಿಗಳು ಪೋಷಕರ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಶ್ರದ್ಧೆಯಿಂದ ವಿದ್ಯಾರ್ಜನೆ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿ ಸಮಯವನ್ನು ಪೋಲು ಮಾಡದೆ ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಮಹೇಶ್ವರಿ ನಿರ್ವಹಣೆ ಮತ್ತು ವಿಜ್ಞಾನ ಸಂಸ್ಥೆ ಅಧ್ಯಕ್ಷ ಎಂ.ಎಸ್.ಸಂದೀಪ್ ಚಕ್ರವರ್ತಿ ಹೇಳಿದರು.

ನಗರದಲ್ಲಿ ಇತ್ತೀಚೆಗೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಬಿಎ, ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.

‘ತಂದೆ ತಾಯಿ ನಿಮ್ಮ ಭವಿಷ್ಯತ್ತಿನ ಬಗ್ಗೆ ಸಾಕಷ್ಟು ಗುರಿ ಇಟ್ಟುಕೊಂಡಿರುತ್ತಾರೆ ಅವರ ಕನಸುಗಳನ್ನು ನನಸು ಮಾಡುವ ದಿಸೆಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಯಾವುದೇ ಸಂದರ್ಭದಲ್ಲಿ ಅವರಿಗೆ ನೋವು ಕೊಡುವುದು ಸಲ್ಲದು. ಅವರನ್ನು ಪೂಜ್ಯನೀಯ ಸ್ಥಾನದಲ್ಲಿ ನೋಡುವ ಮೂಲಕ ಅವರ ಭಾವನೆಗಳಿಗೆ ಸ್ಪಂದಿಸಿ ಮುನ್ನಡೆಯಬೇಕು’ ಎಂದು ತಿಳಿಸಿದರು.

ನ್ಯೂಟನ್ ಗ್ರಾಮರ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚೌಡಪ್ಪ ಮಾತನಾಡಿ, ‘ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಉತ್ತಮರ ಜತೆ ಸಹವಾಸ ಮಾಡುವ ಮೂಲಕ ಸೌಜನ್ಯ ಬೆಳೆಸಿಕೊಳ್ಳಬೇಕು. ಪ್ರಾಮಾಣಿಕತೆ, ನೈತಿಕತೆಯಿಂದ ರೂಢಿಸಿಕೊಳ್ಳಬೇಕು. ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದುವ ಹವ್ಯಾಸಗಳನ್ನು ಬೆಳೆಸಿಕೊಂಡು ಉತ್ತಮ ಭವಿಷ್ಯ ಕಂಡುಕೊಳ್ಳಬೇಕು’ ಎಂದರು.

ವಿದ್ಯಾನಿಕೇತನ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶಿವಕುಮಾರ್ ಮಾತನಾಡಿ, ‘ದೇಶದ ಭಾವಿ ಪ್ರಜೆಗಳಾದ ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಗುಣ ರೂಢಿಸಿಕೊಳ್ಳಬೇಕು. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದೆಂಬಂತೆ ಚಿಕ್ಕಂದಿನಿಂದಲೇ ದೊಡ್ಡ ಗುರಿ ಇಟ್ಟು ವ್ಯಾಸಂಗ ಮಾಡಬೇಕು’ ಎಂದು ಹೇಳಿದರು.

ಕಾಲೇಜಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಕಾಲೇಜಿನ ಪ್ರಾಂಶುಪಾಲ ಪ್ರಭು, ಪ್ರಾಧ್ಯಾಪಕರಾದ ಎಂ.ಶಶಿಕಲಾ, ಅಂಜನಪ್ಪ, ರಾಮಚಂದ್ರಪ್ಪ, ವಿಮಲಾ, ಗೀತಾ, ಮಹಾಲಕ್ಷ್ಮಿ ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !