ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿ

7

ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿ

Published:
Updated:
Deccan Herald

ಚಾಮರಾಜನಗರ: ‘ಗ್ರಾಮಿಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪ್ರತಿಭೆಗಳಿದ್ದಾರೆ. ಅವರನ್ನು ಗುರುತಿಸಿ ಹೆಚ್ಚಿನ ಅವಕಾಶ ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಶಶಿಕಲಾ ಹೇಳಿದರು.

ತಾಲ್ಲೂಕಿನ ಯರಗನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ಅರಕಲವಾಡಿ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕ್ಲಸ್ಟರ್‌ ಮಟ್ಟದ ಕಾರ್ಯಕ್ರಮಗಳಲ್ಲಿ ಉತ್ತಮ ಪ್ರತಿಭೆಗಳನ್ನು ಆಯ್ಕೆ ಮಾಡಿಕೊಂಡು ಮುಂದಿನ ಹಂತಗಳಲ್ಲಿ ಕಾರ್ಯಕ್ರಮ ನಿಡುವಂತೆ ಮಕ್ಕಳನ್ನು ಪ್ರೋತ್ಸಾಹಿಸಬೇಕು ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ನಾಗನಾಯಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದೊಡ್ಡಮ್ಮ, ಸದಸ್ಯೆ ರತ್ನಮ್ಮ, ಅರಕಲವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹದೇವಯ್ಯ ಸಿಆರ್‌ಪಿ ಬಿ.ನಾಗೇಂದ್ರ, ಶಾಲೆಯ ಮುಖ್ಯಶಿಕ್ಷಕರಾದ ಬಸವರಾಧ್ಯ, ಮಹದೇವ ನಾಯಕ, ಶಿಕ್ಷಕರಾದ ಶಿವಪ್ರಸಾದ್, ಶಿವಸ್ವಾಮಿ ಹಾಜರಿದ್ದರು.   

 

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !