ಬರೇಲಿ: ಜ್ವರದಿಂದ 42 ಮಂದಿ ಸಾವು

7

ಬರೇಲಿ: ಜ್ವರದಿಂದ 42 ಮಂದಿ ಸಾವು

Published:
Updated:

ಬರೇಲಿ: ಇಲ್ಲಿಯ ವಿವಿಧ ಜಿಲ್ಲೆಗಳಲ್ಲಿ ಜ್ವರದಿಂದ ಸಾವನ್ನಪ್ಪಿದವರ ಸಂಖ್ಯೆ 42 ಕ್ಕೆ ಏರಿಕೆಯಾಗಿದೆ.

ಬರೇಲಿ ಜಿಲ್ಲೆಯಲ್ಲಿ 15 ದಿನಗಳಲ್ಲಿ 20 ಮಂದಿ ಮೃತಪಟ್ಟಿದ್ದಾರೆ. ಕಳೆದ ಮೂರು ದಿನಗಳಲ್ಲಿ ಬಡಾನ್ ಮತ್ತು ಷಹಜಹಾನ್ಪುರದಲ್ಲಿ ಆರು ಮಂದಿ ಮೃತಪಟ್ಟಿದ್ದು, ಯಾವ ಜ್ವರ ಎಂಬುದು ಇನ್ನು ಪತ್ತೆಯಾಗಿಲ್ಲ. 

ಬರೇಲಿಗೆ ಭೇಟಿ ನೀಡಿದ್ದ ಆರೋಗ್ಯ ಸಚಿವ ಸಿದ್ಧಾರ್ಥ್‌ ನಾಥ್‌ ಸಿಂಗ್‌, ‘ಜ್ವರದಿಂದ ಮೃತಪಟ್ಟವರ ಸಂಖ್ಯೆಯನ್ನು ಗುರುತಿಸಲು ಸರ್ಕಾರದ ವತಿಯಿಂದ ಲೆಕ್ಕ ಪರಿಶೋಧನೆ ನಡೆಸಲಾಗುವುದು’ ಎಂದು ತಿಳಿಸಿದರು. 

‘ಉತ್ತರ ಪ್ರದೇಶದ ಎರಡೂ ಜಿಲ್ಲೆಗಳಲ್ಲಿ ರೋಗ ನಿಯಂತ್ರಣಕ್ಕೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರದ ಐದು ಸದಸ್ಯರ ತಂಡ ಬರೇಲಿ ತಲುಪಿದೆ’ ಎಂದು ಲಖನೌ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ನಿರ್ದೇಶಕ ಮಿಥಿಲೇಶ್ ಚತುರ್ವೇದಿ ತಿಳಿಸಿದರು. 

ಜಿಲ್ಲೆಯಲ್ಲಿ ವೈದ್ಯಕೀಯ ಶಿಬಿರಗಳನ್ನು ಆರಂಭಿಸಲಾಗಿದ್ದು, ಕ್ಷಿಪ್ರ ರೋಗ ನಿರ್ಣಯ ತಂತ್ರಗಳನ್ನು ಬಳಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !