ಮೋದಿ ಹುಟ್ಟುಹಬ್ಬದಂದು ‘ಸೇವಾ ದಿನ’: ಸೆ.17ರಂದು ಆರೋಗ್ಯ ತಪಾಸಣಾ ಶಿಬಿರ

7
ಬಿಜೆಪಿ ನಿರ್ಧಾರ

ಮೋದಿ ಹುಟ್ಟುಹಬ್ಬದಂದು ‘ಸೇವಾ ದಿನ’: ಸೆ.17ರಂದು ಆರೋಗ್ಯ ತಪಾಸಣಾ ಶಿಬಿರ

Published:
Updated:

ಚಿಕ್ಕಬಳ್ಳಾಪುರ: ‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಬಿಜೆಪಿ ವತಿಯಿಂದ ಜಿಲ್ಲೆಯಾದ್ಯಂತ ಸೆ.17 ರಂದು ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ಸೇವಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಜಿ.ವಿ.ಮಂಜುನಾಥ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೋದಿ ಅವರ ಹುಟ್ಟುಹಬ್ಬವನ್ನು ಅದ್ದೂರಿಗಿಂತಲೂ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಿ ಹುಟ್ಟುಹಬ್ಬದಂದು ‘ಸೇವಾ ದಿನ’ವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ. ಸೆ.15 ರಿಂದ ಅಕ್ಟೋಬರ್ ಅಂತ್ಯದವರೆಗೆ ಸ್ವಚ್ಛ ಭಾರತ ಅಭಿಯಾನದಡಿ ಶ್ರಮದಾನ ನಡೆಸಲಾಗುತ್ತದೆ. ರೈಲ್ವೆ, ಬಸ್ ನಿಲ್ದಾಣಗಳು, ಶಾಲಾ- ಕಾಲೇಜು ಆವರಣಗಳು, ಸರ್ಕಾರಿ ಆಸ್ಪತ್ರೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛಗೊಳಿಸಲಾಗುತ್ತದೆ’ ಎಂದು ಹೇಳಿದರು.

‘ಸೆ.17 ರಂದು ಸೋಮವಾರ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಪೆರೇಸಂದ್ರ ಕ್ರಾಸ್‌ನಲ್ಲಿರುವ ನಂಜುಂಡೇಶ್ವರ ಸಭಾಂಗಣದಲ್ಲಿ ಬೆಂಗಳೂರಿನ ವೈದೇಹಿ ಹಾಗೂ ಈಸ್ಟ್ ಪಾಯಿಂಟ್ ಆಸ್ಪತ್ರೆಗಳ ಸಹಯೋಗದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ’ ಎಂದರು. 

‘ಶಿಬಿರದಲ್ಲಿ ಸಕ್ಕರೆ ಕಾಯಿಲೆ, ಹೆಚ್‍ಐವಿ, ಕ್ಯಾನ್ಸರ್ ಸೇರಿದಂತೆ ಎಲ್ಲ ಬಗೆಯ ರೋಗಳ ತಪಾಸಣೆ ನಡೆಸಲಾಗುತ್ತದೆ. ಮೂಳೆ, ಸ್ತ್ರೀರೋಗ, ಕಿವಿ, ಮೂಗು, ಗಂಟಲು ತಜ್ಞರು ಸೇರಿದಂತೆ ನುರಿತ ವೈದ್ಯರ ತಂಡ ಶಿಬಿರದಲ್ಲಿ ಭಾಗವಹಿಸಲಿದೆ’ ಎಂದು ಹೇಳಿದರು.

‘ಸೆ.19 ರಂದು ತಾಲ್ಲೂಕಿನ ನಂದಿ ಹೋಬಳಿಯ ಕಣಿತಹಳ್ಳಿಯ ವಿನಾಯಕ ವಿದ್ಯಾ ಮಂದಿರದಲ್ಲಿ ಕೂಡ ಆರೋಗ್ಯ ತಪಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ರೋಗಿಗಳಿಗೆ ಉಚಿತವಾಗಿ ಔಷಧಿಗಳನ್ನು ವಿತರಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರಗಳಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್ ಮಾತನಾಡಿ, ‘ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ರಾಜಕಾರಣಿ ಮಾತ್ರವಲ್ಲದೆ ಒಬ್ಬ ಕವಿ, ಸಾಹಿತಿಯಾಗಿದ್ದರು. ಅವರು ನಿಧನರಾಗಿ ಸೆ.16ಕ್ಕೆ ಒಂದು ತಿಂಗಳಾಗಲಿದೆ. ಅವರ ನೆನಪಿಗಾಗಿ ಆ ದಿನ ಚಿಕ್ಕಬಳ್ಳಾಪುರದ ಭುವನೇಶ್ವರಿ ವೃತ್ತದಲ್ಲಿ ಪಕ್ಷದ ವತಿಯಿಂದ ಕವಿ ಕಾವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ವಾಜಪೇಯಿ ಅವರು ರಚಿಸಿರುವ ಕವಿತೆಗಳನ್ನು ಪ್ರಸ್ತುತ ಪಡಿಸಲಾಗುತ್ತದೆ’ ಎಂದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಎನ್.ಮಂಜುನಾಥ್, ಒಬಿಸಿ ಮೊರ್ಚಾ ಜಿಲ್ಲಾ ಘಟಕದ ಧ್ಯಕ್ಷ ಚಂದ್ರಶೇಖರ್, ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ರಾಮಪ್ಪ, ಮುಖಂಡರಾದ ಬೈರೇಗೌಡ, ಶ್ರೀನಿವಾಸ ಗೌಡ, ಶ್ರೀನಿವಾಸ್, ಕೃಷ್ಣಮೂರ್ತಿ, ಕೃಷ್ಣಾರೆಡ್ಡಿ, ವಕ್ತಾರ ಲಕ್ಷ್ಮೀಪತಿ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !