ಗುಣಮಟ್ಟದ ಹಾಲು ಉತ್ಪಾದನೆಗೆ ಒತ್ತು ನೀಡಿ

7

ಗುಣಮಟ್ಟದ ಹಾಲು ಉತ್ಪಾದನೆಗೆ ಒತ್ತು ನೀಡಿ

Published:
Updated:
Deccan Herald

ಕೋಲಾರ: ‘ರೈತರು ಗುಣಮಟ್ಟದ ಹಾಲು ಉತ್ಪಾದನೆಗೆ ಒತ್ತು ನೀಡಿದಾಗ ಆರ್ಥಿಕವಾಗಿ ಸಬಲರಾಗಲು ಸಾಧ್ಯ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ತಿಳಿಸಿದರು.

ತಾಲ್ಲೂಕಿನ ಮೂರಾಂಡಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಶುಕ್ರವಾರ ನಡೆದ ಸ್ವಯಚಾಲಿತ ಸಮೂಹ ಹಾಲು ಕರೆಯುವ ಯಂತ್ರಗಳನ್ನು ಉದ್ಘಾಟಿಸಿ ಮಾತನಾಡಿ, ‘ಹೈನೋದ್ಯಮ ಅವಿಭಜಿತ ಕೋಲಾರ ಜಿಲ್ಲೆಯ ರೈತರ ಜೀವನಾಡಿಯಾಗಿದೆ. ಇದಕ್ಕೆ ಕೋಚಿಮುಲ್ ಅಧಿಕಾರಿಗಳು ರೈತರಿಗೆ ಸಹಕಾರ ನೀಡಬೇಕು’ ಎಂದು ತಿಳಿಸಿದರು.

‘ಉತ್ಪಾದಕರು ಗುಣಮಟ್ಟದ ಹಾಲನ್ನು ಸಂಘಗಳಿಗೆ ನೀಡಬೇಕಿದ್ದು, ಸ್ವಯಂಚಾಲಿತ ಯಂತ್ರಗಳಲ್ಲೇ ಹಾಲು ಕರೆದರೆ ಪ್ರತಿ ಲೀಟರ್‌ಗೆ ₨ 10 ಪೈಸೆ ಹೆಚ್ಚುವರಿ ಹಣ ನೀಡಲಾಗುತ್ತಿದೆ. ಹೀಗಾಗಿ ಉತ್ಪಾದಕರು ಇದರ ಪ್ರಯೋಜನೆ ಪಡೆದುಕೊಳ್ಳಲು ಮುಂದಾಗಬೇಕು’ ಎಂದು ಸಲಹೆ ನೀಡಿದರು.

‘ಶೇ.99ರಷ್ಟು ಹಾಲು ಉತ್ಪಾದಕರ ಸಹಕಾರ ಸಂಘಗಳು ಲಾಭದಲ್ಲಿ ನಡೆಯುತ್ತಿರುವುದು ಸಂತಸದ ವಿಚಾರವಾಗಿದ್ದು, ನಿರಂತರವಾಗಿ ಈ ಪ್ರಕ್ರಿಯೆಯನ್ನು ಮುಂದುವರೆಸಿಕೊಂಡು ಹೋಗುವುದು ಉತ್ತಮ’ ಎಂದು ತಿಳಿಸಿದರು.

‘ಹೈನುಗಾರಿಕೆಯನ್ನು ಆರಂಭಿಸಿದ ಹರಿಕಾರ ಎಂ.ವಿ.ಕೃಷ್ಣಪ್ಪ ಭಾವಚಿತ್ರವನ್ನು ಎಲ್ಲ ಹಾಲು ಉತ್ಪಾಕರ ಸಹಕಾರ ಸಂಘಗಳಲ್ಲಿ ಸ್ಥಾಪಿಸಲು ಕೋಚಿಮುಲ್ ಅಧಿಕಾರಿಗಳು ಕ್ರಮಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಗುಣಮಟ್ಟ ಹಾಗೂ ಶುಚಿತ್ವದ ಹಾಲನ್ನು ರೈತರು ಪೂರೈಕೆ ಮಾಡಿದರೆ, ಕೋಚಿಮುಲ್‌ನಿಂದ ಅಗತ್ಯ ಸಹಕಾರ ನೀಡಲಾಗುವುದು’ ಎಂದು ಕೋಚಿಮುಲ್ ನಿರ್ದೇಶಕ ಕೆ.ಆರ್.ರಾಮಕೃಷ್ಣೇಗೌಡ ತಿಳಿಸಿದರು.

‘ದಿವಾಳಿ ಹಂತಕ್ಕೆ ತಲುಪಿದ್ದ ಹಾಲು ಉತ್ಪಾದಕರ ಸಹಕಾರ ಸಂಘಗಳು ಉತ್ತಮ ಸ್ಥಿತಿಯಲ್ಲಿ ನಡೆಯುತ್ತಿವೆ. ತಾಲೂಕಿನಲ್ಲಿ 45 ಹೊಸ ಕಟ್ಟಡಗಳ್ನು ನಿರ್ಮಿಸಲಾಗಿದ್ದು, ಪಕ್ಷ-ಬೇಧ ಮರೆತು ಸಂಘಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್.ನಂಜುಂಡಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಂ.ವೆಂಕಟಸ್ವಾಮಿ, ಕೋಚಿಮುಲ್ ಉಪ ವ್ಯವಸ್ಥಾಪಕ ಡಾ.ಎ.ಸಿ.ಶ್ರೀನಿವಾಸಗೌಡ, ವಿಸ್ತರಣಾಧಿಕಾರಿಗಳಾದ ರಾಜಬಾಬು, ಅಣ್ಣಪ್ಪ ತಡಕೋಡ್, ಜೆಡಿಎಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಈ.ಗೋಪಾಲಪ್ಪ, ಸಂಘದ ಕಾರ್ಯದರ್ಶಿ ಎಂ.ನಾಗರಾಜ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !