ಮಕ್ಕಳ ಆರೋಗ್ಯಕ್ಕೆ ಕ್ರೀಡೆ ಪೂರಕ

6

ಮಕ್ಕಳ ಆರೋಗ್ಯಕ್ಕೆ ಕ್ರೀಡೆ ಪೂರಕ

Published:
Updated:
Deccan Herald

ಕೋಲಾರ: ‘ಕ್ರೀಡಾಪಟುಗಳು ಕ್ರೀಡಾಭ್ಯಾಸದ ಜತೆಗೆ ಆರೋಗ್ಯದ ಕಡೆಗೂ ಗಮನ ಹರಿಸಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಕಿವಿಮಾತು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೆಂಗಳೂರು ವಿಭಾಗ ಮಟ್ಟದ 14 ಮತ್ತು 17 ವರ್ಷ ವಯೋಮಿತಿಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಬಾಲಕ, ಬಾಲಕಿಯರ ಫುಟ್‌ಬಾಲ್‌ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

‘ವಿದ್ಯಾರ್ಥಿಗಳಿಗೆ ಶಿಕ್ಷಣದಷ್ಟೇ ಕ್ರೀಡಾ ಚಟುವಟಿಕೆಗಳು ಮುಖ್ಯ. ಬೆಳೆಯುವ ಮಕ್ಕಳ ಆರೋಗ್ಯಕ್ಕೆ ಕ್ರೀಡೆ ಪೂರಕ. ಕ್ರೀಡಾ ಚಟುವಟಿಕೆಗಳು ಸಮಗ್ರ ಶಿಕ್ಷಣದ ಭಾಗ. ಕ್ರೀಡೆಯಿಂದ ಆರೋಗ್ಯ ಸುಧಾರಿಸುತ್ತದೆ ಮತ್ತು ಓದಿನಲ್ಲಿ ಆಸಕ್ತಿ ಮೂಡುತ್ತದೆ’ ಎಂದು ತಿಳಿಸಿದರು.

‘ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ. ಬದಲಿಗೆ ಭಾಗವಹಿಸುವಿಕೆ ಮುಖ್ಯ. ಸೋತವರು ಹತಾಶರಾಗದೆ ಪ್ರಯತ್ನ ಮುಂದುವರಿಸಿದರೆ ಭವಿಷ್ಯದಲ್ಲಿ ಜಯ ನಿಶ್ಚಿತ. ಕ್ರೀಡೆಗಳಿಂದ ಸ್ಪರ್ಧಾ ಮನೋಭಾವ ಮೂಡುತ್ತದೆ. ಉತ್ತಮ ಕಲಿಕೆಗೆ ಮಕ್ಕಳು ಆರೋಗ್ಯವಂತರಾಗಿರಬೇಕು. ವಿದ್ಯಾರ್ಥಿಗಳು ಓದಿಗಷ್ಟೇ ಸೀಮಿತವಾದರೆ ಮಾನಸಿಕ ಒತ್ತಡ ಹೆಚ್ಚುತ್ತದೆ. ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಒತ್ತಡ ನಿವಾರಣೆಯಾಗುತ್ತದೆ. ಆದ್ದರಿಂದ ಶಿಕ್ಷಕರು ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಬೇಕು’ ಎಂದು ಸಲಹೆ ನೀಡಿದರು.

ಬೆಂಗಳೂರು ವಿಭಾಗ ಮಟ್ಟದ ಜಿಲ್ಲೆಗಳ ವಿವಿಧ ಶಾಲೆಗಳ ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡರು. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್‌.ಗೀತಾ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ (ಪ್ರಭಾರ) ಎಂ.ಮಂಜುನಾಥ್, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ನಾಗರಾಜ್ ಹಾಜರಿದ್ದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !