ಸ್ವಚ್ಛತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಲಹೆ

7

ಸ್ವಚ್ಛತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಲಹೆ

Published:
Updated:
Deccan Herald

ಕೋಲಾರ: ‘ಪರಿಸರ ರಕ್ಷಣೆಯ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದ್ದು, ಅದರ ರಕ್ಷಣೆಗೆ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು’ ಎಂದು ವನೋದಯ ವಿದ್ಯಾಲಯದ ಪ್ರಾಚಾರ್ಯ ಎ.ಎಸಿ.ಎಸ್‌. ರೆಡ್ಡಿ ತಿಳಿಸಿದರು.

ತಾಲ್ಲೂಕಿನ ಚಿಕ್ಕಹಾಸಳ ಜವಾಹರ್ ನವೋದಯ ವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಅಂದೋಲನಕ್ಕೆ ಚಾಲನೆ ನೀಡಿ ಮಾತನಾಡಿ, ‘ಸಮಾಜದಲ್ಲಿ ಸ್ವಚ್ಛತೆ ಕಾಪಾಡಿದಾಗ ಆರೋಗ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯ’ ಎಂದರು.

‘ಆರೋಗ್ಯವೇ ಭಾಗ್ಯ ಎಂಬಂತೆ ಮನುಷ್ಯ ಆರೋಗ್ಯವಾಗಿದ್ದರೆ ಜೀವನದ ಗುರಿ ಸಾಧನೆ ಮಾಡಬಹುದು. ಇತ್ತಿಚೀನ ದಿನಗಳಲ್ಲಿ ಸೊಳ್ಳೆಗಳಿಂದ ಹಾಗೂ ಬಯಲು ಮಲ-ಮೂತ್ರ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದು, ಅದನ್ನು ತಡೆಗಟ್ಟಲು ಸಾರ್ವಜನಿಕರು ಮುಂದಾಗಬೇಕು’ ಎಂದು ಹೇಳಿದರು.

‘ಸ್ವಚ್ಛ ಭಾರತ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಯೋಜನೆ ರೂಪಿಸಿದ್ದು, ಗ್ರಾಮಮಟ್ಟದಿಂದ ಕಾರ್ಯಕತಗೊಳಿಸಿದಾಗ ಮಾತ್ರ ಯೋಜನೆ ಅನುಷ್ಠಾನಗೊಳಿಸಲು ಸಾಧ್ಯ. ಇದಕ್ಕೆ ಸಾರ್ವಜನಿಕರೂ ಸಹಕಾರ ನೀಡಬೇಕು’ ಎಂದು ತಿಳಿಸಿದರು.

‘ಸ್ವಚ್ಛತೆಯು ಜನರ ಆದ್ಯ ಕರ್ತವ್ಯ. ಮಕ್ಕಳು ಜಾಗೃತರಾದರೆ ಸಮಾಜವನ್ನು ತಿದ್ದುತ್ತಾರೆ. ಪ್ರತಿ ಮನೆಯಲ್ಲೂ ಶೌಚಾಲಯ ನಿರ್ಮಾಣ ಮತ್ತು ಬಳಕೆ ಬಗ್ಗೆ ಮಕ್ಕಳನ್ನು ಜಾಗೃತಗೊಳಿಸಬೇಕು. ಸ್ವಚ್ಛತಾ ಕಾರ್ಯ ಜನಾಂದೋಲನದಂತೆ ನಡೆಯಬೇಕು’ ಎಂದು ಅಭಿಪ್ರಾಯಪಟ್ಟರು.

‘ಗ್ರಾಮಗಳನ್ನು ನೋಡಲು ಸುಂದರವಾಗಿಯೇ ಕಾಣುತ್ತವೆ. ಮಳೆ ಬಿದ್ದಾಗ ನೀರು ರಸ್ತೆಲ್ಲಿ ಹರಿಯುತ್ತದೆ. ಚರಂಡಿಗಳಲ್ಲಿ ತ್ಯಾಜ್ಯ ತುಂಬಿ ನೀರು ಸಂಗ್ರಹವಾಗುತ್ತದೆ. ಸ್ಥಳೀಯ ಜನಪ್ರತಿನಿಧಿಗಳು ಗ್ರಾಮಗಳ ಸ್ವಚ್ಛತೆಯ ಕಡೆ ಹೆಚ್ಚು ಗಮನ ಹರಿಸಬೇಕು’ ಎಂದು ಸಲಹೆ ನೀಡಿದರು.

ವಿದ್ಯಾನಿಲಯದ ವಿದ್ಯಾರ್ಥಿಗಳು ತಾಲ್ಲೂಕಿನ ಚಿಕ್ಕಸಾಹಳ ಗ್ರಾಮದಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !