ಕರ್ತವ್ಯದ ಜತೆಗೆ ಆರೋಗ್ಯವೂ ಮುಖ್ಯ: ಯಡಾ ಮಾರ್ಟಿನ್ ಮಾರ್ಬನ್ಯಾಂಗ್

7

ಕರ್ತವ್ಯದ ಜತೆಗೆ ಆರೋಗ್ಯವೂ ಮುಖ್ಯ: ಯಡಾ ಮಾರ್ಟಿನ್ ಮಾರ್ಬನ್ಯಾಂಗ್

Published:
Updated:
Deccan Herald

ಯಾದಗಿರಿ: ‘ಪೊಲೀಸ್ ಸಿಬ್ಬಂದಿ ಸರ್ಕಾರದ ಮತ್ತು ಸಮಾಜದ ಅವಿಭಾಜ್ಯ ಅಂಗವಾಗಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ತುಂಬಾ ಅಗತ್ಯ’ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ಯಾಲಯದ ಸಂಭಾಗಣದಲ್ಲಿ ಭಾನುವಾರ ಜಿಲ್ಲಾ ಭಾರತೀಯ ವೈದ್ಯಕೀಯ ಸಂಘ ವತಿಯಿಂದ ಪೊಲೀಸ್ ಸಿಬ್ಬಂದಿ ಕುಟುಂಬದ ಸದಸ್ಯರಿಗೆ ಉಚಿತ ತಪಾಸಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪೊಲೀಸ್ ಸಿಂಬಂದಿ ಕರ್ತವ್ಯ ಒತ್ತಡದಲ್ಲಿ ಹಗಲು ಇರುಳು ಎನ್ನದೆ ಸೇವೆ ಸಲ್ಲಿಸುತ್ತಾರೆ. ಕರ್ತವ್ಯ ಜತೆಗೆ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಹಚ್ಚಿನ ಕಾಳಜಿವಹಿಸಬೇಕು. ಸಮಾಜದ ಶಾಂತಿಯನ್ನು ಕಾಪಾಡುವ ಪೋಲಿಸ್ ಅಧಿಕಾರಿಗಳು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೋರಬೇಕು’ ಎಂದು ಹೇಳಿದರು.

ಜಿಲ್ಲಾ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ವಿಜಯಕುಮಾರ ಮಾತನಾಡಿ, ಒತ್ತಡದ ನಡುವೆ ಕಾರ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಇರುವುದರಿಂದ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದನ್ನು ರೂಢಿಸಿಕೊಳ್ಳಬೇಕು. ಯೋಗಾಭ್ಯಾಸದಿಂದ ದೈಹಿಕ ಮತ್ತು ಮಾನಸಿಕ ಒತ್ತಡಗಳಿಂದ ಮುಕ್ತಿ ಪಡೆಯಲು ಸಾಧ್ಯವಿದೆ ಎಂದ ಅವರು, ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಂದ ದೂರ ಉಳಿಯುವಂತೆ ಸಲಹೆ ನೀಡಿದರು.

ಡಾ.ಶರಣ ಬಸಪ್ಪ ಎಲ್ಹೇರಿ, ಡಾ.ವೈಜನಾಥ ಪಾಟೀಲ್, ಡಾ. ನೀಲಮ್ಮ, ಡಿವೈಎಸ್‌ಪಿ ಎಸ್.ಪಾಂಡುರಂಗ, ಸಿಪಿಐ ಮೌನೇಶ ಪಾಟೀಲ್, ಪಿಎಸ್‌ಐ ಮಹಾಂತೇಶ ಸಜ್ಜನ್ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !