ಮಂಗಳವಾರ, ಮೇ 24, 2022
30 °C

ರಾಜಕೀಯ ಮಾಡಿದರೆ ಹುಷಾರ್!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಿಕ್ಷಕರು ಚುನಾವಣೆ ಪ್ರಕ್ರಿಯೆಯಲ್ಲಿ ನೇರವಾಗಿ ಭಾಗವಹಿಸಿ ಅಭ್ಯರ್ಥಿಗಳ ಸಹಚರರಂತೆ ವರ್ತಿಸಿ ಪ್ರಚಾರ ಮಾಡುವುದು ಕಂಡುಬಂದಿದೆ. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯರು ದೂರು ನೀಡಿದಲ್ಲಿ ಅಂಥವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಪಂಚಾಯಿತಿ ಅಧ್ಯಕ್ಷ ಶಿವಪ್ರಭು ಪಾಟೀಲ್ ತಿಳಿಸಿದರು.ಗುರುವಾರ ಜಿಲ್ಲಾ ಪಂಚಾಯಿತಿ ನೂತನ ಸಭಾಂಗಣದಲ್ಲಿ ಜರುಗಿದ ಕರ್ನಾಟಕ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ಒಟ್ಟು 128 ವಸತಿ ನಿಲಯಗಳು ಕಾರ್ಯನಿರ್ವಹಿಸುತ್ತಿವೆ. ಸುಮಾರು 18 ಸಾವಿರಕ್ಕಿಂತ ಹೆಚ್ಚು ಮಕ್ಕಳಿಗೆ ಸ್ಕಾಲರ್‌ಶಿಪ್ ನೀಡಲಾಗುತ್ತಿದೆ. ಇದಕ್ಕಾಗಿ ಕೇಂದ್ರದ 7 ಕೋಟಿ ರೂಪಾಯಿ ಮತ್ತು ರಾಜ್ಯದ 4 ಕೋಟಿ ರೂಪಾಯಿ ಅನುದಾನ ಲಭ್ಯವಿದೆ. ಸ್ಕಾಲರ್‌ಶಿಪ್ ಪಡೆಯಲು ಅರ್ಹರಿರುವ ಎಲ್ಲ ಮಕ್ಕಳಿಗೂ ನೇರವಾಗಿ ಬ್ಯಾಂಕ್ ಖಾತೆಗೆ ಹಣ ಪಾವತಿಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಣೆ ನೀಡಿದರು.ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯಿಂದ 77 ಮೆಟ್ರಿಕ್ ಪೂರ್ವ, 22 ಮೆಟ್ರಿಕ್ ನಂತರ, 7 ಮೂರಾರ್ಜಿ ದೇಸಾಯಿ, 5 ಆಶ್ರಮ ಶಾಲೆ, 3 ಹೊಲಿಗೆ ತರಬೇತಿ ಕೇಂದ್ರ ಹೀಗೆ ಒಟ್ಟು 114 ಸಂಸ್ಥೆಗಳು ಹಾಗೂ ಅಲ್ಪಸಂಖ್ಯಾತರ 7 ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಶಾಲೆಗೆ ಭರಿಸಿದ ಶುಲ್ಕವನ್ನು ಸ್ಕಾಲರ್‌ಶಿಪ್ ಮೂಲಕ ಮರುಭರಿಸುವ ಸೌಲಭ್ಯವಿದ್ದು, 1.5 ಕೋಟಿ ರೂಪಾಯಿ ಅನುದಾನ ಲಭ್ಯವಿದೆ. ಹಿಂದಿನ ವರ್ಷಗಳ ಸ್ಕಾಲರ್‌ಶಿಪ್ ಬೇಡಿಕೆಯ ಪ್ರಕಾರ ಒಟ್ಟು 6.5 ಕೋಟಿ ರೂಪಾಯಿ ಅನುದಾನ ಬೇಕಾಗುವುದು. ಈ ಪೈಕಿ 1.6 ಕೋಟಿ ಬಿಡುಗಡೆಯಾಗಿದೆ. ತರಗತಿಗಳಿಗೆ ಕಡ್ಡಾಯವಾಗಿ ಹಾಜರಾಗುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಿ ಸ್ಕಾಲರ್‌ಶಿಪ್ ನೀಡಲು ಆದೇಶಿಸಲಾಗಿದೆ ಎಂದು ವಿವರಿಸಿದರು.ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ಪಂಗಡದ ಫಲಾನುಭವಿಗಳನ್ನು ಗುರುತಿಸಿ ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 3282 ಕೊಳವೆಬಾವಿಗಳನ್ನು ಕೊರೆಯಲಾಗಿದೆ. ಈ ಪೈಕಿ 1563 ಕೊಳವೆ ಭಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ಇನ್ನೂ 1719 ಕೊಳವೆಬಾವಿಗಳು ಬಾಕಿ ಉಳಿದಿವೆ. ಇವುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಜೆಸ್ಕಾಂಗೆ ಶುಲ್ಕ ಪಾವತಿಸಿ ನೊಂದಾಯಿಸಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.ಈ ಸಮಸ್ಯೆಯನ್ನು ಬಗೆಹರಿಸಲು ಜೆಸ್ಕಾಂ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಜಂಟಿಯಾಗಿ ಸ್ಥಳಕ್ಕೆ ಬೇಟಿ ನೀಡಿ, ನಿಖರವಾದ ಮಾಹಿತಿ ಪಡೆದು ವರದಿ ಸಲಿಸ್ಲಬೇಕು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಲ್ಮಾ ಕೆ.ಫಾಹಿಂ ಸೂಚಿಸಿದರು.ಮುಖ್ಯ ಯೋಜನಾ ಆಧಿಕಾರಿ ಬಸವರಾಜ, ಜಿಲಾ ್ಲಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.