ವರ್ಗಾವಣೆ ಕೋರಿಕೆ, ಜಿಲ್ಲಾ ನ್ಯಾಯಾಧೀಶರಿಗೆ ಸಲ್ಲಿಸಬೇಕು ಎಂದ ಹೈಕೋರ್ಟ್‌

7

ವರ್ಗಾವಣೆ ಕೋರಿಕೆ, ಜಿಲ್ಲಾ ನ್ಯಾಯಾಧೀಶರಿಗೆ ಸಲ್ಲಿಸಬೇಕು ಎಂದ ಹೈಕೋರ್ಟ್‌

Published:
Updated:

ಬೆಂಗಳೂರು: ‘ಅಧೀನ ನ್ಯಾಯಾಲಯಗಳ ನ್ಯಾಯಾಧೀಶರು ತಮ್ಮ ವರ್ಗಾವಣೆಗೆ ಸಂಬಂಧಿಸಿದ ಯಾವುದೇ‌‌ ಅಹವಾಲುಗಳನ್ನು ನೇರವಾಗಿ ರಿಜಿಸ್ಟ್ರಾರ್ ಜನರಲ್‌ ಅವರಿಗೆ ಸಲ್ಲಿಸುವಂತಿಲ್ಲ’ ಎಂದು ಹೈಕೋರ್ಟ್‌ ತಿಳಿಸಿದೆ.

ಈ ಕುರಿತಂತೆ ರಿಜಿಸ್ಟ್ರಾರ್ ಜನರಲ್‌ ಅಶೋಕ ಜಿ.ನಿಜಗಣ್ಣವರ ಸುತ್ತೋಲೆ ಹೊರಡಿಸಿದ್ದು, ‘ಸಂಬಂಧಿಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮೂಲಕವೇ ಮನವಿ ಸಲ್ಲಿಸಬೇಕು. ಒಂದು ವೇಳೆ ನೇರವಾಗಿ ರಿಜಿಸ್ಟ್ರಾರ್ ಜನರಲ್‌ಗೆ ಮನವಿ ಸಲ್ಲಿಸಿದರೆ ಅವುಗಳನ್ನು ಪುರಸ್ಕರಿಸಲಾಗದು. ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ತಾಕೀತು ಮಾಡಲಾಗಿದೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !