ಭಾನುವಾರ, ಸೆಪ್ಟೆಂಬರ್ 26, 2021
21 °C

ಸ್ವಚ್ಛ ಕ್ಯಾಂಪಸ್‌: ರೇವಾ ವಿವಿಗೆ 6ನೇ ರ‍್ಯಾಂಕ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಂಗಳೂರು: ವಿಶಾಲವಾದ ಕ್ಯಾಂಪಸ್‌ ಹೊಂದಿರುವ ರೇವಾ ವಿಶ್ವವಿದ್ಯಾಲಯಕ್ಕೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು(ಎಂಎಚ್‌ಆರ್‌ಡಿ) ‘ಸ್ವಚ್ಛ ಕ್ಯಾಂಪಸ್‌’ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ ನೀಡಿದೆ.

‘ನಮ್ಮ ವಿಶ್ವವಿದ್ಯಾಲಯವು ಪರಿಸರ ಸ್ನೇಹಿಯಾಗಿದೆ. ಪ್ಲಾಸ್ಟಿಕ್‌ ಬ್ಯಾನರ್‌ ಮುಕ್ತವಾಗಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯಗಳು ಇವೆ. ಶುದ್ಧ ಕುಡಿಯುವ ನೀರಿನ ಘಟಕ, ಮಳೆ ನೀರು ಸಂಗ್ರಹ, ಸೌರಶಕ್ತಿ ವ್ಯವಸ್ಥೆ ಇದೆ. ಇವುಗಳಿಂದಾಗಿ ಉತ್ತಮ ರ್‍ಯಾಂಕಿಂಗ್‌ ಸಿಕ್ಕಿರುವುದು ಸಂತಸ ತಂದಿದೆ’ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಪಿ.ಶ್ಯಾಮರಾಜು ತಿಳಿಸಿದರು.

ದೇಶದಲ್ಲಿನ 6,029 ಕಾಲೇಜುಗಳು ರ್‍ಯಾಂಕಿಂಗ್‌ಗಾಗಿ ಅರ್ಜಿ ಸಲ್ಲಿಸಿದ್ದವು. ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತು, ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ ಅಧಿಕಾರಿಗಳ ತಂಡ ಕಾಲೇಜುಗಳಿಗೆ ಭೇಟಿ ನೀಡಿ, ಪರಿಶೀಲಿಸಿ, ಅಂತಿಮವಾಗಿ 51 ಶಿಕ್ಷಣ ಸಂಸ್ಥೆಗಳಿಗೆ ‘ಸ್ವಚ್ಛ ಕ್ಯಾಂಪಸ್‌ ರ್‍ಯಾಂಕಿಂಗ್‌’ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.