ರಾಜಕಾರಣ ರಕ್ತದ ಕಣಕಣದಲ್ಲಿದೆ: ನಿಖಿಲ್‌

7

ರಾಜಕಾರಣ ರಕ್ತದ ಕಣಕಣದಲ್ಲಿದೆ: ನಿಖಿಲ್‌

Published:
Updated:

ಮಂಡ್ಯ: ‘ರಾಜಕಾರಣ ರಕ್ತದ ಕಣಕಣದಲ್ಲೂ ಹರಿಯುತ್ತಿದೆ. ಚಿತ್ರರಂಗದಲ್ಲಿ ಇದ್ದಕೊಂಡೇ ರಾಜಕಾರಣವನ್ನೂ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್‌ ಹೇಳಿದರು.

ಗುತ್ತಲು ಬಳಿ ಈಚೆಗೆ ನಡೆದ ಲಾರಿ ಅಪಘಾತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರು ಹಾಗೂ ಗಾಯಾಳುಗಳಿಗೆ ಸಾಂತ್ವನ ಹೇಳಿ ಅವರು ಮಾತನಾಡಿದರು.

‘ನಾನು ಮುಖ್ಯಮಂತ್ರಿಗಳ ಪರವಾಗಿ ಬಂದಿದ್ದೇನೆ. ಗಾಯಾಳುಗಳಿಗೆ ವೈಯಕ್ತಿಕವಾಗಿ ಸಹಾಯ ಮಾಡಿದ್ದೇನೆ. ಚಿಕಿತ್ಸಾ ವೆಚ್ಚವನ್ನು ಭರಿಸಲಾಗುವುದು. ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ. ಹೀಗಾಗಿ ಚಾಲಕರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು’ ಎಂದರು.

ರಾಜಕಾರಣ ಪ್ರವೇಶದ ಬಗ್ಗೆ ಮಾತನಾಡಿದ ಅವರು, ಜೆಡಿಎಸ್‌ ಕಾರ್ಯಕರ್ತರ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಡ ಇದೆ. ಸದ್ಯ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !