ನಗರದಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

7

ನಗರದಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

Published:
Updated:
Deccan Herald

ರಾಯಚೂರು: ಸಾರ್ವಜನಿಕ ಹಿತದೃಷ್ಟಿಯಿಂದ ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆಗಾಗಿ ನಗರ ವ್ಯಾಪ್ತಿಯ ರಸ್ತೆಗಳಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧಿಸಲು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಜಿಲ್ಲಾಡಳಿತ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ರೈಲು ನಿಲ್ದಾಣ ಹತ್ತಿರದ ಗೂಡ್‌ಶೆಡ್‌ನಿಂದ ಸರಕು ಸಾಗಿಸುವ ಭಾರೀ ವಾಹನಗಳ ಸಂಚಾರವನ್ನು ಬೆಳಿಗ್ಗೆ 9ರಿಂದ 12ರವರೆಗೆ, ಸಂಜೆ 4ರಿಂದ ರಾತ್ರಿ 8ಗಂಟೆವರೆಗೆ ಸಂಚಾರ ನಿರ್ಬಂಧಿಸಲು ನಗರದಲ್ಲಿ ಗಂಟೆಗೆ 40 ಕಿ.ಮೀ. ವೇಗ ಮೀರದಂತೆ ಚಲಾಯಿಸಲು ತೀರ್ಮಾನ ಮಾಡಲಾಯಿತು.

ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ ಭಾರಿ ವಾಹನಗಳನ್ನು ರಸ್ತೆಯ ಮೇಲೆ ನಿಲುಗಡೆಗೆ ನಿಷೇಧ, ಬೆಳಿಗ್ಗೆ 9ರಿಂದ ರಾತ್ರಿ 8ರವರೆಗೆ ಸರಕು ವಾಹನಗಳ ಲೋಡಿಂಗ್ ಹಾಗೂ ಆನ್‌ಲೋಡಿಂಗ್ ಮಾಡದಂತೆ ಒಪ್ಪಿಗೆ ಪಡೆಯಲಾಯಿತು.

ಪಾರ್ಕಿಂಗ್, ನೋಪಾರ್ಕಿಂಗ್ ಹಾಗೂ ಏಕಮುಖ ಸಂಚಾರಕ್ಕಾಗಿ ಸ್ಥಳ ಗುರುತಿಸಬೇಕು. ಶಾಲೆಗಳಲ್ಲಿ ಸಿಸಿಟಿವಿ ಕ್ಯಾಮೇರಾ ಅಳವಡಿಸಬೇಕು. ಶಾಲಾ ವಾಹನದಲ್ಲಿ ಸ್ತ್ರೀ ಅಟೆಂಡೆಂಟ್‌ಗಳ ನೇಮಕ, ಚಾಲಕ ನೇಮಕ ಸೂಕ್ಷವಾಗಿ ಗಮನಿಸಬೇಕು. ಬೀದಿ ದೀಪಗಳ ಅಳವಡಿಕೆಗೆ ಒತ್ತು ಕೊಡಲು ಹೆಚ್ಚುವರಿ ಜಿಲ್ಲಾಧಿಕಾರಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮತ್ತು ಪೌರಾಯುಕ್ತ ಜಿಲ್ಲಾಧಿಕಾರಿ ಸೂಚಿಸಿದರು.

ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !