ಮಂಡ್ಯ: ಬಿಜೆಪಿ ಅಭ್ಯರ್ಥಿ ಬದಲಿಸಲು ಆಗ್ರಹ, ಜಿಲ್ಲಾಧ್ಯಕ್ಷರ ಮೇಲೆ ಹಲ್ಲೆಗೆ ಯತ್ನ

7

ಮಂಡ್ಯ: ಬಿಜೆಪಿ ಅಭ್ಯರ್ಥಿ ಬದಲಿಸಲು ಆಗ್ರಹ, ಜಿಲ್ಲಾಧ್ಯಕ್ಷರ ಮೇಲೆ ಹಲ್ಲೆಗೆ ಯತ್ನ

Published:
Updated:

ಮಂಡ್ಯ: ಜಿಲ್ಲೆಗೆ ಪರಿಚಯವೇ ಇಲ್ಲದ ಡಾ.ಸಿದ್ದರಾಮಯ್ಯ ಅವರಿಗೆ ಲೋಕಸಭೆ ಉಪಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ನೀಡಿದೆ ಎಂದು ಆರೋಪಿಸಿ ಪಕ್ಷದ ಕಾರ್ಯಕರ್ತರು ಶುಕ್ರವಾರ ಜಿಲ್ಲಾ ಘಟಕದ ಅಧ್ಯಕ್ಷ ಕೆ.ನಾಗಣ್ಣಗೌಡ ಮೇಲೆ ಹಲ್ಲೆಗೆ ಯತ್ನಿಸಿದರು.

ವಲಸಿಗರಿಗೆ ಟಿಕೆಟ್‌ ನೀಡಲಾಗಿದೆ ಎಂದು ಆರೋಪಿಸಿ ಪಕ್ಷದ ಕಚೇರಿ ಎದುರು ಕೆಲವರು ಪ್ರತಿಭಟನೆ ನಡೆಸಿದರು. ಜೆಡಿಎಸ್‌ ಜತೆ ಹೊಂದಾಣಿಕೆ ಮಾಡಿಕೊಂಡು ನಿವೃತ್ತ ಅಧಿಕಾರಿಗೆ ಟಿಕೆಟ್‌ ನೀಡಲಾಗಿದೆ. ಕಾಂಗ್ರೆಸ್‌– ಜೆಡಿಎಸ್‌ ಮೈತ್ರಿಯಿಂದ ಜನರಿಗೆ ಬೇಸರವಾಗಿದ್ದು ಈ ಉಪ ಚುನಾವಣೆಯಲ್ಲಿ ಬಿಜೆಪಿಗೆ ಸಾಕಷ್ಟು ಅವಕಾಶಗಳಿದ್ದವು. ಇದು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಪರಿಣಾಮ ಬೀರುತ್ತಿತ್ತು. ಹೊರಗಿನವರಿಗೆ ಟಿಕೆಟ್‌ ಸಿಗಲು ಜಿಲ್ಲಾ ಘಟಕದ ಅಧ್ಯಕ್ಷ ಕೆ.ನಾಗಣ್ಣಗೌಡರ ನಿರ್ಲಕ್ಷ್ಯವೇ ಕಾರಣ ಎಂದು ಕಾರ್ಯಕರ್ತರು ಆರೋಪಿಸಿದರು.

ಕಚೇರಿಯೊಳಗೆ ನುಗ್ಗಿದ ಕಾರ್ಯಕರ್ತರು, ಅಧ್ಯಕ್ಷರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಕೆಲ ಕಾರ್ಯಕರ್ತರು ಆಕ್ರೋಶದಿಂದ ಹಲ್ಲೆ ನಡೆಸಲು ಮುಂದಾದರು. ನಂತರ ಹಿರಿಯ ಮುಖಂಡರು ಸಮಾಧಾನಪಡಿಸಿದರು.

‘ಶೀಘ್ರವೇ ಅಭ್ಯರ್ಥಿ ಬದಲಾಗಬೇಕು. ವಲಸಿಗರು ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಬಂದು ಠೇವಣಿ ಕಳೆದುಕೊಂಡು ಮತ್ತೆ ಪಕ್ಷ ತೊರೆಯುತ್ತಾರೆ. ಆ ಮೂಲಕ ಪಕ್ಷವನ್ನು ಮತ್ತಷ್ಟು ದುರ್ಬಲಗೊಳಿಸುತ್ತಾರೆ. ಉಪಚುನಾವಣೆಯಲ್ಲಿ ಅಭ್ಯರ್ಥಿ ಬದಲಾವಣೆ ಮಾಡದಿದ್ದರೆ ನಾವು ಅಭ್ಯರ್ಥಿ ವಿರುದ್ಧವೇ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !