ಎಪಿಎಂಸಿಗೆ ಜಮೀನು ಗುರುತು

6

ಎಪಿಎಂಸಿಗೆ ಜಮೀನು ಗುರುತು

Published:
Updated:

ಕೋಲಾರ: ‘ಎಪಿಎಂಸಿ ಮಾರುಕಟ್ಟೆಯಲ್ಲಿ ಸ್ಥಳಾವಕಾಶದ ಕೊರತೆ ಇದೆ. ರಾಷ್ಟ್ರೀಯ ಹೆದ್ದಾರಿ 75ರ ಪಕ್ಕದಲ್ಲಿರುವ ಚಲುವನಹಳ್ಳಿ ಬಳಿ ಮಾರುಕಟ್ಟೆಗೆ 30 ಹೆಕ್ಟೇರ್ ಜಮೀನು ಗುರುತಿಸಲಾಗಿದೆ’ ಎಂದು ಎಪಿಎಂಸಿ ನೂತನ ಅಧ್ಯಕ್ಷ ಡಿ.ಎಲ್‌.ನಾಗರಾಜು ಹೇಳಿದರು.

ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಚಲುವನಹಳ್ಳಿ ಬಳಿಯ ಜಾಗ ಅಭಿವೃದ್ಧಿಪಡಿಸಿ ಅಲ್ಲಿಗೆ ಮಾರುಕಟ್ಟೆ ಸ್ಥಳಾಂತರಿಸಲಾಗುವುದು’ ಎಂದು ತಿಳಿಸಿದರು.

‘ಎಪಿಎಂಸಿ ಅಭಿವೃದ್ಧಿಗಾಗಿ ಸರ್ಕಾರಕ್ಕೆ ಈಗಾಗಲೇ ₹ 50 ಕೋಟಿ ಅಂದಾಜು ಮೊತ್ತದ ಕ್ರಿಯಾಯೋಜನೆ ಸಲ್ಲಿಸಲಾಗಿದೆ. ಸರ್ಕಾರ ಕ್ರಿಯಾಯೋಜನೆಗೆ ಅನುಮೋದನೆ ನೀಡಿ ಅನುದಾನ ಬಿಡುಗಡೆ ಮಾಡಿದರೆ ಸದ್ಯ ಮಾರುಕಟ್ಟೆ ಇರುವ ಜಾಗದಲ್ಲೇ ಮತ್ತಷ್ಟು ಜಾಗ ಖರೀದಿಸಿ ಅಭಿವೃದ್ಧಿಪಡಿಸಲಾಗುವುದು’ ಎಂದರು.

‘ಶಾಸಕ ಶ್ರೀನಿವಾಸಗೌಡರ ನಿರ್ಣಯಕ್ಕೆ ವಿರುದ್ಧವಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಶಾಸಕರ ಜತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅವರು ನಮ್ಮ ನಾಯಕರು ಮತ್ತು ನನ್ನ ರಾಜಕೀಯ ಗುರು. ಚುನಾವಣೆಗೆ ಸ್ಪರ್ಧಿಸಿದ್ದ ನಿಕಟಪೂರ್ವ ಅಧ್ಯಕ್ಷ ವೆಂಕಟೇಶ್ ನನ್ನ ತಮ್ಮನಿದ್ದಂತೆ’ ಎಂದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !