ನೀತಿ ಸಂಹಿತೆ ಉಲ್ಲಂಘನೆ ಆರೋಪ: ಲಕ್ಷ್ಮಿ ಹೆಬ್ಬಾಳಕರ್‌ಗೆ ಬಂಧನ ವಾರಂಟ್‌

7

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಲಕ್ಷ್ಮಿ ಹೆಬ್ಬಾಳಕರ್‌ಗೆ ಬಂಧನ ವಾರಂಟ್‌

Published:
Updated:
Deccan Herald

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.

ವಿಧಾನಸಭೆ ಚುನಾವಣೆ ವೇಳೆ ಅವಧಿ ಮೀರಿ ಪ್ರಚಾರ ಮಾಡಿದ ಆರೋಪದಲ್ಲಿ ಬೆಳಗಾವಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ  2 ಪ್ರಕರಣಗಳು ಮತ್ತು ಹಣ ಹಂಚಿಕೆ ಮಾಡಿದ ಆರೋಪದಲ್ಲಿ ಬೆಳಗಾವಿ ಎಪಿಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಮೂರು ಪ್ರಕರಣಗಳ ತನಿಖೆ ನಡೆಸಿದ್ದ ಪೊಲೀಸರು, ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

 ಈ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರಮುಖ ಆರೋಪಿ ಒಬ್ಬರೇ ಇರುವ ಕಾರಣ ವಿಚಾರಣೆಯನ್ನು ಒಂದೇ ದಿನಕ್ಕೆ ನಿಗದಿಪಡಿಸುತ್ತಿರುವ ವಿಶೇಷ ನ್ಯಾಯಾಲಯ, ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ಸಮನ್ಸ್ ಜಾರಿ ಮಾಡಿತ್ತು. ಆದರೆ, ಲಕ್ಷ್ಮಿ ಎರಡು ಬಾರಿಯು ಗೈರು ಹಾಜರಾಗಿದ್ದರು. ಈ ಪ್ರಕರಣಗಳಲ್ಲಿ ಇನ್ನು ಕೆಲವರು ಕೂಡ ಆರೋಪಿಗಳಾಗಿದ್ದಾರೆ.  ವಿಚಾರಣೆಯನ್ನು ಅ.27ಕ್ಕೆ ಮುಂದೂಡಿದೆ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !