ದೇಸಿ ಸಂಸ್ಕೃತಿ ಮರೆಯಾಗುತ್ತಿದೆ: ನಾಗಾನಂದ ಕೆಂಪರಾಜ್

7

ದೇಸಿ ಸಂಸ್ಕೃತಿ ಮರೆಯಾಗುತ್ತಿದೆ: ನಾಗಾನಂದ ಕೆಂಪರಾಜ್

Published:
Updated:
Deccan Herald

ಕೋಲಾರ: ‘ಜಾಗತೀಕರಣದ ಭರಾಟೆಯಲ್ಲಿ ದೇಸಿ ಸಂಸ್ಕೃತಿ ಮತ್ತು ಕಲೆ ಮರೆಯಾಗುತ್ತಿವೆ’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಗಾನಂದ ಕೆಂಪರಾಜ್ ಕಳವಳ ವ್ಯಕ್ತಪಡಿಸಿದರು.

ನಿರಂತರ ಕಲ್ಚರಲ್ ಅಂಡ್ ಚಾರಿಟಬಲ್ ಟ್ರಸ್ಟ್ ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ನೃತ್ಯ ಸಂಭ್ರಮ- ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಪಾಶ್ಚಿಮಾತ್ಯ ಸಂಸ್ಕೃತಿ ಪ್ರಭಾವ ಹೆಚ್ಚಿ ಸ್ಥಳೀಯ ಕಲೆಗಳು ನಶಿಸುತ್ತಿವೆ ಸಾಂಸ್ಕೃತಿಕ ಹಾಗೂ ಜಾನಪದ ಕಲಾ ಪ್ರಕಾರಗಳು ಮರೆಯಾಗುತ್ತಿವೆ’ ಎಂದು ವಿಷಾದಿಸಿದರು.

‘ದೇಸಿ ಕಲೆ, ಸಂಸ್ಕೃತಿ, ಜಾನಪದ ಕಲಾ ಪ್ರಕಾರಗಳನ್ನು ಪೋಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಮಕ್ಕಳಿಗೆ ಶಿಕ್ಷಣ ನೀಡಿದರೆ ಸಾಲದು. ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಅವರನ್ನು ಪ್ರೇರೇಪಿಸಬೇಕು. ಮಕ್ಕಳಲ್ಲಿ ನಮ್ಮ ಸಂಸ್ಕೃತಿಕ ದರ್ಶನವಾಗಬೇಕು. ಮಕ್ಕಳ ಮನಸ್ಸು ಪ್ರಯೋಗ ಶಾಲೆಯಂತಿದ್ದು, ಇಂತಹ ವೇದಿಕೆಗಳ ಮೂಲಕ ಅವರ ಪ್ರತಿಭೆ ಹೊರತರಬೇಕು’ ಎಂದು ಸಲಹೆ ನೀಡಿದರು.

‘ಇಂದು ಸಾಂಪ್ರದಾಯಿಕ ಕಲೆಗಳಿಗೆ ಪ್ರೋತ್ಸಾಹ ಕಡಿಮೆಯಾಗುತ್ತಿದೆ. ನಮ್ಮ ನೆಲದ ಸಂಸ್ಕೃತಿ ಹಾಳಾಗುತ್ತಿದೆ. ಟಿ.ವಿ ಹಾಗೂ ಸಿನಿಮಾ ಮಾಯೆಯೂ ಮಕ್ಕಳನ್ನು ತಪ್ಪು ದಾರಿಗೆ ಎಳೆಯುತ್ತಿದೆ. ಮತ್ತೊಂದೆಡೆ ಇಂಟರ್‌ನೆಟ್‌ ಮತ್ತು ಮೊಬೈಲ್‌ನ ಅತಿಯಾದ ಬಳಕೆಯಿಂದ ವಿದ್ಯಾರ್ಥಿಗಳ ಅಮೂಲ್ಯ ಸಮಯ ಹಾಳಾಗುತ್ತಿದೆ’ ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿ ಅಧ್ಯಕ್ಷ ಬಿಸಪ್ಪಗೌಡ ಅಭಿಪ್ರಾಯಪಟ್ಟರು.

‘ಅನೇಕ ಮಕ್ಕಳು ಶಾಲೆಯಲ್ಲಿ ನೃತ್ಯ ತರಬೇತಿ ಪಡೆಯುತ್ತಿದ್ದು, ಜನಪದ ಮತ್ತು ಶಾಸ್ತ್ರೀಯ ನೃತ್ಯದಲ್ಲಿ ಪ್ರತಿಭಾವಂತರಾಗುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಓದಿನಷ್ಟೇ ಸಾಂಸ್ಕೃತಿಕ ಚಟುವಟಿಕೆಗಳೂ ಮುಖ್ಯ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !