ಗುರುವಾರ , ಫೆಬ್ರವರಿ 20, 2020
18 °C

ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸೋಮವಾರ ಬೆಳಿಗ್ಗೆಯಿಂದ ನಗರದಲ್ಲಿ ಮೋಡ ಮುಸುಕಿತ್ತು. ಸಂಜೆ ಹೊತ್ತಿಗೆ ತುಂತುರು ಮಳೆ ಬಿದ್ದು ಬಳಿಕ ಮಂಜು ಕವಿಯಿತು.

‘ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದ ದಕ್ಷಿಣ ಭಾಗಗಳಲ್ಲಿ ಎರಡು ದಿನಗಳಿಂದ ಉತ್ತಮ ಮಳೆಯಾಗಿದೆ. ನಗರದಲ್ಲಿ ಮೋಡ ಹಾಗೂ ಮಂಜು ಕಂಡುಬಂದಿರುವುದಕ್ಕೆ ಮಾಲಿನ್ಯ ಕಾರಣ ಅಲ್ಲ’ ಎಂದು ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಪ್ರಕಾಶ್‌ ಮಾಹಿತಿ ನೀಡಿದರು.

‘ಬೆಳಿಗ್ಗೆಯಿಂದಲೇ ವಾತಾವರಣದಲ್ಲಿ ಬದಲಾವಣೆ ಆಗಿದ್ದು, ಆರ್ದ್ರತೆ ಕಂಡುಬಂದಿದೆ. ತಾಪಮಾನ ಕಡಿಮೆಯಾಗಿದೆ. ಇದರಿಂದ ಎಂ.ಜಿ ರಸ್ತೆ ಸೇರಿದಂತೆ ಕೆಲವು ಭಾಗಗಳಲ್ಲಿ ಮಂಜು ಮುಸುಕಿತ್ತು’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು