ಗುರುವಾರ , ಅಕ್ಟೋಬರ್ 29, 2020
21 °C

ಭಾರತ ಮತ್ತು ವೆಸ್ಟ್‌ ಇಂಡೀಸ್ ನಡುವಣ ಕ್ರಿಕೆಟ್ ಪಂದ್ಯ: ಘಂಟೆ ಬಾರಿಸಲಿರುವ ಸಚಿನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಮುಂಬೈ: ಇದೇ 29ರಂದು ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ವೆಸ್ಟ್‌ ಇಂಡೀಸ್ ನಡುವಣ ಪಂದ್ಯಕ್ಕೆ ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ವಿಶೇಷ ಅತಿಥಿಯಾಗಿ ಬರಲಿದ್ದಾರೆ. ಆ ದಿನ ಅವರು ಇಲ್ಲಿರುವ ಬೃಹತ್ ಘಂಟೆಯನ್ನು ಬಾರಿಸುವ ಮೂಲಕ ಪಂದ್ಯವನ್ನು ಉದ್ಘಾಟಿಸಲಿದ್ದಾರೆ.

ಐದು ಪಂದ್ಯಗಳ ಸರಣಿಯ ನಾಲ್ಕನೇ ಪಂದ್ಯ ಇದಾಗಿದೆ. ಈ ಪಂದ್ಯವನ್ನು ವಾಂಖೆಡೆ ಕ್ರೀಡಾಂಗಣದಿಂದ ಬ್ರೆಬೋರ್ನ್ ಕ್ರೀಡಾಂಗಣಕ್ಕೆ ಸ್ಥಳಾಂತರ ಮಾಡಲಾಗಿತ್ತು.

ಸಚಿನ್ ಅವರು 15ನೇ ವರ್ಷದವರಾಗಿದ್ದಾಗಲೇ ಬ್ರೆಬೋರ್ನ್‌ ಕ್ರೀಡಾಂಗಣದಲ್ಲಿ ಸದಸ್ಯತ್ವ ನೀಡಲಾಗಿತ್ತು. ಇದೀಗ ಅವರನ್ನು ಆಹ್ವಾನಿಸಲು ಸಂತಸವಾಗುತ್ತದೆ ಎಂದು ಕ್ರಿಕೆಟ್‌ ಕ್ಲಬ್ ಆಫ್‌ ಇಂಡಿಯಾ (ಸಿಸಿಐ) ಕ್ರಿಕೆಟ್ ಕೆಫೆ ವೆಬ್‌ಸೈಟ್‌ಗೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು