ಐವರು ನ್ಯಾಯಮೂರ್ತಿಗಳ ಪ್ರಮಾಣ ವಚನ ಇಂದು

7

ಐವರು ನ್ಯಾಯಮೂರ್ತಿಗಳ ಪ್ರಮಾಣ ವಚನ ಇಂದು

Published:
Updated:

ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ನೂತನವಾಗಿ ನೇಮಕಗೊಂಡಿರುವ ಐವರು ನ್ಯಾಯಮೂರ್ತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ಶನಿವಾರ (ನ.3) ನಡೆಯಲಿದೆ.

ರಾಜಭವನದ ಗಾಜಿನಮನೆಯಲ್ಲಿ ನಡೆಯುವ ಈ ಸಮಾರಂಭದಲ್ಲಿ ರಾಜ್ಯಪಾಲರು ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸುವರು.

ಅಶೋಕ್ ಜಿ. ನಿಜಗಣ್ಣನವರ, ಹೆತ್ತೂರು ಪುಟ್ಟಸ್ವಾಮಿಗೌಡ ಸಂದೇಶ್, ಕೃಷ್ಣನ್ ನಟರಾಜನ್, ಪ್ರಹ್ಲಾದ್‌ ರಾವ್ ಗೋವಿಂದ ರಾವ್ ಮುತಾಲಿಕ್ ಪಾಟೀಲ ಮತ್ತು ಅಪ್ಪಾ ಸಾಹೇಬ ಶಾಂತಪ್ಪ ಬೆಳ್ಳುಂಕೆ ಪ್ರಮಾಣ ವಚನ ಸ್ವೀಕರಿಸಲಿರುವ ನ್ಯಾಯಮೂರ್ತಿಗಳು.

ಮಧ್ಯಪ್ರದೇಶಕ್ಕೆ ವರ್ಗ: ಮದ್ರಾಸ್ ಹೈಕೋರ್ಟ್‌ ನ್ಯಾಯಮೂರ್ತಿ ಹುಲುವಾಡಿ ಜಿ.ರಮೇಶ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂಕೋರ್ಟ್ ಕೊಲಿಜಿಯಂ ತೀರ್ಮಾನಿಸಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಐವರು ನ್ಯಾಯಮೂರ್ತಿಗಳ ಕೊಲಿಜಿಯಂ ಅಕ್ಟೋಬರ್ 29ರಂದು ನ್ಯಾಯಮೂರ್ತಿ ರಮೇಶ್ ಅವರನ್ನು ಮದ್ರಾಸ್‌ನಿಂದ ಮಧ್ಯಪ್ರದೇಶ ಹೈಕೋರ್ಟ್‌ಗೆ ವರ್ಗಾಯಿಸಲು ನಿರ್ಣಯಿಸಿತ್ತು.

ಆದರೆ, ನವೆಂಬರ್‌ 1ರಂದು ರಮೇಶ್ ಅವರು ಕೊಲಿಜಿಯಂಗೆ ಮನವಿ ಸಲ್ಲಿಸಿ, ‘ನನ್ನನ್ನು ಮದ್ರಾಸ್ ಹೈಕೋರ್ಟ್‌ನಲ್ಲೇ ಉಳಿಸಿ, ಅಥವಾ ಬೇರೆ ಯಾವುದಾದರೂ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಸ್ಥಾನಕ್ಕೆ ಪರಿಗಣಿಸಿ’ ಎಂದು ಮನವಿ ಮಾಡಿದ್ದರು. ಈ ಕುರಿತಂತೆ ಶುಕ್ರವಾರ ಮರು ಪರಿಶೀಲನೆ ನಡೆಸಿದ ಕೊಲಿಜಿಯಂ, ಈ ಮೊದಲು ಕೈಗೊಂಡ ತೀರ್ಮಾನದಂತೆ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ಗೆ ವರ್ಗಾಯಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಣಯ ಕೈಗೊಂಡಿದೆ.

ಮದ್ರಾಸ್ ಹೈಕೋರ್ಟ್‌ಗೆ ವರ್ಗ: ರಾಜ್ಯ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರನ್ನು ಮದ್ರಾಸ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ನಿರ್ಧರಿಸಿದೆ. 

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !