ಮಂಡ್ಯ ಬಿಜೆಪಿ ಅಭ್ಯರ್ಥಿಯೂ ಹಿಂದಕ್ಕೆ ಎಂದಿದ್ದ ಗೋಪಾಲಕೃಷ್ಣ ವಿರುದ್ಧ ಎಫ್‌ಐಆರ್‌

7

ಮಂಡ್ಯ ಬಿಜೆಪಿ ಅಭ್ಯರ್ಥಿಯೂ ಹಿಂದಕ್ಕೆ ಎಂದಿದ್ದ ಗೋಪಾಲಕೃಷ್ಣ ವಿರುದ್ಧ ಎಫ್‌ಐಆರ್‌

Published:
Updated:

ಮಂಡ್ಯ: ಲೋಕಸಭೆ ಉಪ ಚುನಾವಣಾ ಕಣದಿಂದ ಮಂಡ್ಯ ಬಿಜೆಪಿ ಅಭ್ಯರ್ಥಿಯೂ ಹಿಂದೆ ಸರಿಯುತ್ತಾರೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಮುಖಂಡ ಬೇಳೂರು ಗೋಪಾಲಕೃಷ್ಣ ವಿರುದ್ಧ ನಗರದ ಪಶ್ಚಿಮ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ರಾಮನಗರ ವಿಧಾನಸಭಾ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಎಲ್‌.ಚಂದ್ರಶೇಖರ್‌ ಅವರಂತೆಯೇ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಹಿಂದೆ ಸರಿಯುತ್ತಾರೆ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ವಿರುದ್ಧ ಡಾ.ಸಿದ್ದರಾಮಯ್ಯ ನ.2ರಂದು ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದರು. ಗೋಪಾಲಕೃಷ್ಣ ಹೇಳಿಕೆಯಿಂದ ಹಿನ್ನಡೆ ಆಗುವ ಸಾಧ್ಯತೆ ಇದೆ. ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟಾಗುವ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದರು.

ಈ ಕುರಿತು ಹೆಚ್ಚಿನ ತನಿಖೆಗಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಚುನಾವಣಾಧಿಕಾರಿ ಸೂಚಿಸಿದ್ದರು. ಹೀಗಾಗಿ ನಗರದ ಪಶ್ಚಿಮ ಠಾಣೆಯಲ್ಲಿ ಐಪಿಸಿ ಕಲಂ 171ಜಿ ಅಡಿ ಬೇಳೂರು ಗೋಪಾಲಕೃಷ್ಣ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಬರಹ ಇಷ್ಟವಾಯಿತೆ?

  • 11

    Happy
  • 0

    Amused
  • 0

    Sad
  • 0

    Frustrated
  • 4

    Angry

Comments:

0 comments

Write the first review for this !