ಡಿಸೆಂಬರ್‌ನಲ್ಲಿ ಚೆನ್ನಮ್ಮ ಜಯಂತಿ ಉತ್ಸವ

7
ಕೂಡಲಸಂಗಮ, ಹರಿಹರ ಪೀಠದ ಶ್ರೀಗಳನ್ನು ಒಂದೇ ವೇದಿಕೆಗೆ ಕರೆತರಲು ನಿರ್ಧಾರ?

ಡಿಸೆಂಬರ್‌ನಲ್ಲಿ ಚೆನ್ನಮ್ಮ ಜಯಂತಿ ಉತ್ಸವ

Published:
Updated:
Deccan Herald

ಬಾಗಲಕೋಟೆ: ಜಿಲ್ಲಾ ಮಟ್ಟದಲ್ಲಿ ರಾಣಿ ಚೆನ್ನಮ್ಮ ಜಯಂತಿಯನ್ನು ಡಿಸೆಂಬರ್ ತಿಂಗಳಿನಲ್ಲಿ ಅದ್ಧೂರಿಯಾಗಿ ಆಚರಿಸಲು ಭಾನುವಾರ ನಗರದಲ್ಲಿ ನಡೆದ ಪಂಚಮಸಾಲಿ ಸಮಾಜದ ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ತಿಳಿದುಬಂದಿದೆ.

ನವನಗರದ ಶಾಸಕ ಮುರುಗೇಶ್ ನಿರಾಣಿ ಒಡೆತನದ ತೇಜಸ್ ಇಂಟರ್‌ನ್ಯಾಶನಲ್ ಶಾಲೆಯಲ್ಲಿ ನಡೆದ ಸಭೆಯ ಸಾನ್ನಿಧ್ಯವನ್ನು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸಮ್ಮುಖದಲ್ಲಿ ಸಮಾಜದ ಮುಖಂಡರು ಚರ್ಚಿಸಿ ಈ ನಿರ್ಧಾರ ಕೈಗೊಂಡರು.

ಸಮಾಜದವರು ಎಲ್ಲರೂ ಒಟ್ಟಾಗಿ ಚನ್ನಮ್ಮ ಜಯಂತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಪಂಚಮಸಾಲಿ ಸಮಾವೇಶವನ್ನು ಆಚರಿಸಬೇಕು ಎಂದು ತೀರ್ಮಾನಿಸಲಾಯಿತು.

‘ದೀಪಾವಳಿ ಹಬ್ಬದ ನಂತರ ಮತ್ತೊಂದು ಸಭೆ ಕರೆದು ಅಲ್ಲಿ ಶಾಸಕ ಸಿದ್ದು ಸವದಿ, ಮಾಜಿ ಶಾಸಕರಾದ ವಿಜಯಾನಂದ ಕಾಶಪ್ಪನವರ, ಎಂ.ಪಿ.ನಾಡಗೌಡ ಹಾಗೂ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹಾಗೂ ಸಮಾಜದ ಉಳಿದ ಮುಖಂಡರನ್ನು ಸೇರಿಸಿ ದಿನಾಂಕ ನಿಗದಿಗೊಳಿಸೋಣ. ಜಯಂತಿ ಆಚರಣೆಗೆ ಉತ್ಸವ ಸಮಿತಿ ರಚಿಸೋಣ’ ಎಂದರು.

ಶಾಸಕ ಮುರುಗೇಶ ನಿರಾಣಿ ಮಾತನಾಡಿ, ‘ಕೂಡಲಸಂಗಮ ಹಾಗೂ ಹರಿಹರ ಪೀಠದ ಶ್ರೀಗಳಿಬ್ಬರನ್ನು ಹಾಗೂ ಎಲ್ಲಾ ಮುಖಂಡರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಸಮಾಜದ ಒಗ್ಗಟ್ಟು ಪ್ರದರ್ಶಿಸಲು’ ಸಲಹೆ ನೀಡಿದರು.

ಮಾಜಿ ಶಾಸಕ ಎಂ.ಪಿ.ರವೀಂದ್ರ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಕಾರಣ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಘಟಕದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರು ಸಭೆಗೆ ಬಂದಿರಲಿಲ್ಲ. ಜಮಖಂಡಿ ಘಟಕದ ಅಧ್ಯಕ್ಷ ಪಿ.ಎನ್.ಪಾಟೀಲ, ಎಪಿಎಂಸಿ ಮಾಜಿ ಅಧ್ಯಕ್ಷ ಶಿವಾನಂದ ಅಬ್ದುಲಪುರ, ಜಿಲ್ಲಾ ಘಟಕದ ಅಧ್ಯಕ್ಷ ಧರಿಯಪ್ಪ ಸಾಂಗ್ಲಿಕರ್ ಹಾಗೂ ಶಿವಾನಂದ ಗಬ್ಬೂರು, ಉದ್ಯಮಿ ಹಂಪನಗೌಡರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !