ಹತಾಶೆಗೊಂಡ ಬಿಜೆಪಿಯಿಂದ ಜನರನ್ನು ಎತ್ತಿ ಕಟ್ಟುವ ಯತ್ನ: ಸಚಿವ ಶಿವಶಂಕರರೆಡ್ಡಿ

7

ಹತಾಶೆಗೊಂಡ ಬಿಜೆಪಿಯಿಂದ ಜನರನ್ನು ಎತ್ತಿ ಕಟ್ಟುವ ಯತ್ನ: ಸಚಿವ ಶಿವಶಂಕರರೆಡ್ಡಿ

Published:
Updated:
Deccan Herald

ಚಿಕ್ಕಬಳ್ಳಾಪುರ: ‘ಉಪಚುನಾವಣೆಯ ಸೋಲು, ದೇಶದಾದ್ಯಂತ ಬಿಜೆಪಿ ವಿರೋಧಿ ಅಲೆಯಿಂದ ಹತಾಶರಾಗಿರುವ ಬಿಜೆಪಿಯವರು ಇದೀಗ ಧಾರ್ಮಿಕ ಭಾವನೆಗಳನ್ನು ಕೆದಕುವ, ಎತ್ತಿ ಕಟ್ಟುವ ಕೆಲಸಕ್ಕೆ ಮುಂದಾಗಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಆರೋಪಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶದಲ್ಲಿ ಆಡಳಿತ ನಡೆಸಲು ಬಿಜೆಪಿ ಸಂಪೂರ್ಣ ವಿಫಲವಾಗಿದೆ. ಕಳೆದ ಐದು ವರ್ಷಗಳಲ್ಲಿ ಅವರು ನೀಡಿದ ಯಾವುದೇ ಭರವಸೆ ಈಡೇರಿಸಿಲ್ಲ. ಹೀಗಾಗಿ ದೇಶದಲ್ಲಿ ಬಿಜೆಪಿ ಅಲೆ ಕಾಣಿಸಿಕೊಂಡಿದೆ. ಅದಕ್ಕೆ ಇತ್ತೀಚೆಗೆ ನಡೆದ ಉಪ ಚುನಾವಣೆಯ ಫಲಿತಾಂಶವೇ ಸಾಕ್ಷಿ’ ಎಂದರು.

‘ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಕಾರಣ ಬಿಜೆಪಿಯವರು ಹಿಂದೂ ಧರ್ಮ ಮುಂದೆ ಮಾಡಿ ಚುನಾವಣೆ ಎದುರಿಸಲು ಹೊರಟಿದ್ದಾರೆ. ಹಿಂದೂತ್ವದ ವಾದ ಮಂಡಿಸುತ್ತ, ರಾಮ ಮಂದಿರ ಕಟ್ಟುತ್ತೇವೆ ಎನ್ನುತ್ತ ಹಿಂದೂ ಸಮಾಜವನ್ನು ಎತ್ತಿ ಕಟ್ಟುವ ಕೆಲಸ ಮುಂದಾಗುತ್ತಿದ್ದಾರೆ. ಇದು ದುರ್ದೈವದ ಸಂಗತಿ. ಮುಂದಿನ ದಿನಗಳಲ್ಲಿ ಅವರಿಗೆ ಜನರೇ ಪಾಠ ಕಲಿಸುತ್ತಾರೆ’ ಎಂದು ತಿಳಿಸಿದರು.

‘ಬಿಜೆಪಿಯವರು ಅಲ್ಪಸಂಖ್ಯಾತರು, ದಲಿತರ ಏಳಿಗೆ ಸಹಿಸುವುದಿಲ್ಲ. ಅದಕ್ಕೆ ಮಲೇಗಾಂವ್ ಸ್ಫೊಟ, ಬಾಬರಿ ಮಸೀದಿ ಧ್ವಂಸ ಸೇರಿದಂತೆ ಅನೇಕ ಪ್ರಕರಣಗಳ ಉದಾಹರಣೆಗಳಿವೆ. ಇದೀಗ ಟಿಪ್ಪು ಜಯಂತಿ ವಿರೋಧಿಸುತ್ತಿರುವುದರಲ್ಲಿ ಹುರುಳಿಲ್ಲ. ರಾಜಕೀಯ ಲಾಭದ ಉದ್ದೇಶದಿಂದ ಜಯಂತಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !