ಐಸಿಸಿ ರ‍್ಯಾಂಕಿಂಗ್: ಕುಲದೀಪ್‌ಗೆ 23ನೇ ಸ್ಥಾನ

7

ಐಸಿಸಿ ರ‍್ಯಾಂಕಿಂಗ್: ಕುಲದೀಪ್‌ಗೆ 23ನೇ ಸ್ಥಾನ

Published:
Updated:
Deccan Herald

ದುಬೈ: ಭಾರತ ಕ್ರಿಕೆಟ್ ತಂಡದ ಚೈನಾಮ್ಯಾನ್ ಬೌಲರ್ ಕುಲದೀಪ್ ಯಾದವ್ ಅವರು ಮಂಗಳವಾರ ಪ್ರಕಟವಾದ ಐಸಿಸಿ ಟ್ವೆಂಟಿ–20 ಕ್ರಿಕೆಟ್ ರ‍್ಯಾಂಕಿಂಗ್‌ನಲ್ಲಿ  23ನೇ ಸ್ಥಾನಕ್ಕೇರಿದ್ದಾರೆ.

ಇದು ಅವರ ಜೀವನಶ್ರೇಷ್ಠ ಸಾಧನೆಯಾಗಿದೆ. ಈ ಮೊದಲು ಅವರು 37ನೇ ಸ್ಥಾನದಲ್ಲಿದ್ದರು. ಈಚೆಗೆ ನಡೆದ ವೆಸ್ಟ್ ಇಂಡೀಸ ಎದುರಿನ ಟ್ವೆಂಟಿ–20 ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ  ಉತ್ತಮವಾಗಿ ಆಡಿದ್ದರು.

ಮಧ್ಯಮವೇಗಿ ಭುವನೇಶ್ವರ್ ಕುಮಾರ್ ಅವರು 19ನೇ ಸ್ಥಾನ ಮತ್ತು ಜಸ್‌ಪ್ರೀತ್ ಬೂಮ್ರಾ 21ನೇ ಸ್ಥಾನಕ್ಕೇರಿದ್ದಾರೆ.

ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಅವರು ಕ್ರಮವಾಗಿ ಏಳನೇ ಮತ್ತು  16ನೇ ಸ್ಥಾನ ಪಡೆದಿದ್ದಾರೆ.

ತಂಡಗಳ ವಿಭಾಗದಲ್ಲಿ ಪಾಕಿಸ್ತಾನ ಮತ್ತು ಭಾರತ ತಂಡಗಳು ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನ ಉಳಿಸಿಕೊಂಡಿವೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !