ಭಾನುವಾರ, ಡಿಸೆಂಬರ್ 15, 2019
21 °C

ಬ್ಯಾಸ್ಕೆಟ್ ಬಾಲ್‌: ಬೆಂಗಳೂರು ಉತ್ತರ ತಂಡಕ್ಕೆ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಕೋಲಾರ: ಪದವಿ ಪೂರ್ಣ ಶಿಕ್ಷಣ ಇಲಾಖೆಯಿಂದ ನಗರದಲ್ಲಿ ಮೂರು ದಿನಗಳ ಕಾಲ ನಡೆದ ರಾಜ್ಯಮಟ್ಟದ ಬ್ಯಾಸ್ಕೆಟ್‌ ಬಾಲ್ ಪಂದ್ಯಾವಳಿಯಲ್ಲಿ ಬೆಂಗಳೂರು ಉತ್ತರ ವಿಭಾಗದ ಬಾಲಕ ಮತ್ತು ಬಾಲಕಿಯರ ತಂಡಗಳು ಪ್ರಥಮ ಸ್ಥಾನಪಡೆದುಕೊಂಡು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿವೆ.

‘ವಿಜೇತರಾಗಿ ವಿಜಯ ಪಥಾಕೆಯನ್ನು ಹಾರಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಶ್ಲಾಘನೀಯ. ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲಿ ಪಾಲ್ಗೊಂಡು ದೈಹಿಕ ಶಕ್ತಿಯನ್ನು ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಒಂದು ಅಕ್ಷರ ಅಂತರವಷ್ಟೆ. ಸೋತವನು ಗೆಲ್ಲಲು ಸಿದ್ದನಾಗಬೇಕೆ ಹೊರತ್ತು ಅದನ್ನು ನೆನೆದು ದುಖಃಪಡುವುದು ಸರಿಯಲ್ಲ’ ಎಂದು ತಿಳಿಸಿದರು.

‘2019ರಲ್ಲಿ ದೆಹಲಿಯಲ್ಲಿ ರಾಷ್ಟ್ರಮಟ್ಟದ ಬ್ಯಾಸ್ಕೆಟ್ ಬಾಲ್‌ ಪಂದ್ಯಾವಳಿ ನಡೆಯಲಿದ್ದು, ಅಲ್ಲಿಯೂ ಆಯ್ಕೆಯಾಗಿ ರಾಜ್ಯಕ್ಕೆ ಕೀರ್ತಿ ತರಬೇಕು’ ಶುಭಕೋರಿದರು.

ಬೆಂಗಳೂರು ದಕ್ಷಿಣದ ಬಾಲಕ ಮತ್ತು ಬಾಲಕಿಯರ ತಂಡಗಳು ದ್ವಿತೀಯ ಸ್ಥಾನ ಪಡೆದುಕೊಂಡಿವೆ.ಪಂದ್ಯಾವಳಿಯೂ ಕನಕ ಬ್ಯಾಸ್ಕೆಟ್ ಬಾಲ್ ಕ್ಲಬ್‌ನ ಅಧ್ಯಕ್ಷ ನಾಗರಾಜ್, ಕಾರ್ಯದರ್ಶಿ ಅಂಚೆ ಅಶ್ವಥ್, ಮುದ್ದುರಾಜ್, ಅದಿನಾರಾಯಣ್, ಅರುಣ್ ಉಸ್ತುವಾರಿ ವಹಿಸಿದ್ದರು. ತೀರ್ಪುಗಾರರಾಗಿ ರಾಜೇಂದ್ರ, ನಾಗರಾಜ್, ಗುರುಪ್ರಸಾದ್ ಕಾರ್ಯನಿರ್ವಹಿಸಿದರು.

ಪ್ರತಿಕ್ರಿಯಿಸಿ (+)