ಸೋಮವಾರ, ಸೆಪ್ಟೆಂಬರ್ 28, 2020
28 °C

ಮತದಾರರ ಪಟ್ಟಿ ಪರಿಶೀಲಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಕೋಲಾರ: ‘ಅಧಿಕಾರಿಗಳು ಮನೆಮನೆಗೂ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲನೆ ನಡೆಸಿ ಡಿ.5ರೊಳಗೆ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ‘ಚುನಾವಣೆ ಯಾವುದೇ ಆಗಿದ್ದರೂ ಮತದಾರರ ಪಟ್ಟಿ ಅತಿಮುಖ್ಯ. ಚುನಾವಣೆ ಸಂದರ್ಭದಲ್ಲಿ ಒತ್ತಡದಲ್ಲಿ ಕೆಸಲ ಮಾಡುವ ಬದಲು ಮೊದಲೇ ಮತದಾರರ ಪಟ್ಟಿ ತಯಾರಿಸಿ ಇಟ್ಟುಕೊಳ್ಳುವುದು ಉತ್ತಮ’ ಎಂದು ಹೇಳಿದರು.

‘ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆಗಳು ಕಂಡುಬರುವುದಿಲ್ಲ. ನಗರಪ್ರದೇಶಗಳಲ್ಲಿಯೇ ಹೆಚ್ಚಿನ ಸಮಸ್ಯೆಗಳಾಗುತ್ತವೆ. ಹೀಗಾಗಿ ಎಚ್ಚರಿಕೆಯಿಂದ ತಮ್ಮ ಜವಾಬ್ದಾರಿ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

‘ನಗರಸಭೆ, ಪುರಸಭೆಗಳಲ್ಲಿ ವಾರ್ಡ್‌ಗಳಲ್ಲಿ ಜನಸಂಖ್ಯೆ ಕಡಿಮೆ ಇರುತ್ತಾರೆ. 200-ರಿಂದ 400 ಮನೆಗಳು ಇರುತ್ತವೆ. ಭೂತ್ ಮಟ್ಟ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಮಾಹಿತಿ ಪಡೆಯಬೇಕು. ಅದನ್ನು ಬಿಟ್ಟು ಎಲ್ಲಿಯೋ ಒಂದು ಕಡೆ ಕುಳಿತು ವರದಿ ನೀಡಿದಲ್ಲಿ ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಮತದಾರರ ಪಟ್ಟಿ ಪರಿಶೀಲನೆ ಸಂಬಂಧ ಪ್ರಚಾರ ನೀಡಬೇಕು. ಡಿ.15ರತನಕ ತಿದ್ದುಪಡಿಗೆ ಅವಕಾಶವಿದ್ದು, ಡಿ.26ಕ್ಕೆ ಅಂತಿಮ ಪಟ್ಟಿ ನೀಡಬೇಕಿದೆ. ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಪ್ರಕ್ರಿಯೆಯನ್ನು ಆಯಾ ತಹಸೀಲ್ದಾರ್‌ಗಳು ನೋಡಿಕೊಳ್ಳಬೇಕು’ ಎಂದು ತಿಳಿಸಿದರು.

ಸಭೆಯಲ್ಲಿ ಎಚ್ಚುವರಿ ಜಿಲ್ಲಾಧಿಕಾರಿ ಪುಷ್ಪಲತಾ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.