ಗುರುವಾರ , ಮಾರ್ಚ್ 4, 2021
30 °C

ಕುತಂತ್ರಿಗಳಿಗೆ ಹೆದರಲ್ಲ: ರಮೇಶ್‌ಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ನಾನು ನ್ಯಾಯ ನೀತಿಗೆ, ಜನಕ್ಕೆ ಹಾಗೂ ಜನರ ಸ್ವರೂಪದಲ್ಲಿರುವ ದೇವರಿಗೆ ಮಾತ್ರ ಭಯಪಡುತ್ತೇನೆಯೇ ಹೊರತು ಕುತಂತ್ರಿಗಳಿಗೆ ಹೆದರಲ್ಲ’ ಎಂದು ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‌ಕುಮಾರ್ ಹೇಳಿದರು.

ಇಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಶಾಸಕನಾಗಿದ್ದಾಗ ತಪ್ಪು ಮಾಡಿದವರ ವಿರುದ್ಧ ಮಾತನಾಡಿದ್ದೇನೆ. ಕೆಲ ಸಂದರ್ಭದಲ್ಲಿ ಪಕ್ಷದ ವಿರುದ್ಧವಾಗಿಯೂ ಮಾತನಾಡಿದ್ದೇನೆ’ ಎಂದರು.

‘ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆ ಸಹಜ. 5 ವರ್ಷವಾದ ಮೇಲೆ ಸಾರ್ವತ್ರಿಕ ಚುನಾವಣೆ ಬರಲೇಬೇಕು, ಚುನಾವಣೆ ಮುಂದೂಡಲು ಸಾಧ್ಯವಿಲ್ಲ. ನಸೀರ್‌ ಅಹಮ್ಮದ್‌ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಅವರ ಅಭಿನಂದನಾ ಕಾರ್ಯಕ್ರಮ ಪಕ್ಷಾತೀತವಾಗಿದ್ದು, ಆಹ್ವಾನದ ಮೇರೆಗೆ ಬಂದಿದ್ದೇನೆ’ ಎಂದು ಸ್ಪಷ್ಟಪಡಿಸಿದರು.

‘ಸಂಸದ ಕೆ.ಎಚ್.ಮುನಿಯಪ್ಪ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಇದಕ್ಕೆ ಕಾರ್ಯಕ್ರಮದ ಆಯೋಜಕರೇ ಉತ್ತರಿಸಬೇಕು. ಮುನಿಯಪ್ಪ ಪಕ್ಷದ ಹಿರಿಯ ನಾಯಕರು. ಅಲ್ಲದೇ, ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯಲ್ಲಿ (ಸಿಡಬ್ಲ್ಯೂಸಿ) ವಿಶೇಷ ಆಹ್ವಾನಿತ ಸದಸ್ಯರಾಗಿರುವ ಅವರು ಗೌರವಯುತರು’ ಎಂದರು.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಈ ಕಾರ್ಯಕ್ರಮ ಆಯೋಜಿಸಲು ಕಾರಣವೇನು ಎಂಬ ಪ್ರಶ್ನೆಗೆ ಉತ್ತರಿಸಿದ ರಮೇಶ್‌ಕುಮಾರ್‌, ‘ಇದಕ್ಕೆ ಪಕ್ಷ, ಪಂಗಡ, ಜಾತಿ ಯಾವುದೂ ಇಲ್ಲ. ಇದು ಸದುದ್ದೇಶದಿಂದ ಆಯೋಜಿಸಿರುವ ಕಾರ್ಯಕ್ರಮ’ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು