ಮಂಗಳೂರು: ನಗರದಾದ್ಯಂತ ಪ್ರತಿಬಂಧಕಾಜ್ಞೆ ಜಾರಿ

7
ಬಾಬರಿ ಮಸೀದಿ ಧ್ವಂಸ ವರ್ಷಾಚರಣೆ

ಮಂಗಳೂರು: ನಗರದಾದ್ಯಂತ ಪ್ರತಿಬಂಧಕಾಜ್ಞೆ ಜಾರಿ

Published:
Updated:

ಮಂಗಳೂರು: ಬಾಬರಿ ಮಸೀದಿ ಧ್ವಂಸಗೊಳಿಸಿದ ಘಟನೆಯ ವರ್ಷಾಚರಣೆ ಸಂದರ್ಭದಲ್ಲಿ ವಿಜಯೋತ್ಸವ ಮತ್ತು ಕರಾಳ ದಿನಗಳ ಆಚರಣೆಗೆ ಕೆಲವು ಸಂಘಟನೆಗಳು ಮುಂದಾಗಿರುವ ಕಾರಣದಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್‌ ಆದೇಶ ಹೊರಡಿಸಿದ್ದಾರೆ.

‘ಹಿಂದೂ ಸಂಘಟನೆಗಳು ವಿಜಯೋತ್ಸವ ಆಚರಣೆಗೆ ಮುಂದಾಗಿವೆ ಮತ್ತು ಮುಸ್ಲಿಂ ಸಂಘಟನೆಗಳು ಕರಾಳ ದಿನ ಆಚರಣೆಗೆ ಕರೆನೀಡಿವೆ. ಈ ಸಮಯದಲ್ಲಿ ಅಹಿತಕರ ಘಟನೆಗಳು ಸಂಭವಿಸುವ ಅಪಾಯವಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ವರದಿ ನೀಡಿದ್ದಾರೆ. ಅದನ್ನು ಆಧರಿಸಿ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಸೆಕ್ಷನ್‌ 35ರ ಅಡಿಯಲ್ಲಿ S ಜಾರಿಗೊಳಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ಆದೇಶದಲ್ಲಿ ತಿಳಿಸಿದ್ದಾರೆ.

ಗುರುವಾರ ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಸ್ತೆ ತಡೆ, ಮುತ್ತಿಗೆ ಸೇರಿದಂತೆ ಯಾವುದೇ ರೀತಿಯ ಪ್ರತಿಭಟನೆ ಅಥವಾ ಸಮಾವೇಶ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !